ಬೆಳಗಾವಿ: ‘ಕನ್ನಡ ಭಾಷೆ ಶಕ್ತಿ ಮತ್ತು ಸಾಧ್ಯತೆ ಅಗಾಧವಾದದ್ದು. ಇಂದು ಯುವಜನರು ತಂತ್ರಜ್ಞಾನದಿಂದ ವಿಮುಖವಾಗಬಾರದು. ಬದಲಿಗೆ ಕನ್ನಡ ಭಾಷೆ ಬಳಸಲು, ಬೆಳೆಸಲು ಮತ್ತು ಉಳಿಸಲು ತಂತ್ರಜ್ಞಾನದ ನೆರವು ಪಡೆಯಬೇಕು’ ಎಂದು ಪತ್ರಕರ್ತ ಜೋಗಿ ಕರೆ ನೀಡಿದರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಕನ್ನಡ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಕನ್ನಡ ಉಳಿಸುವುದು ನಮ್ಮ ಕೈಯಲ್ಲಿ ಇಲ್ಲ. ಆದರೆ, ಅದನ್ನು ಬಳಸುವುದು ಮತ್ತು ಬೆಳೆಸುವುದು ನಮ್ಮ ಜವಾಬ್ದಾರಿ. ಕನ್ನಡದ ಅಳಿವಿಗೆ ಅದೆಷ್ಟೋ ಕಾರಣಗಳಿದ್ದರೂ, ಅದರ ಉಳಿವಿಗೆ ಬಳಕೆಯೊಂದೇ ಪರಿಹಾರ’ ಎಂದರು.

ಸಿಂಡಿಕೇಟ್ ಸದಸ್ಯ ಪ್ರೊ.ಎಸ್.ಎಸ್.ಅಂಗಡಿ, ‘ಭಾಷೆ ಒಂದು ಸಂವಹನ ಮಾಧ್ಯಮ. ಒಂದು ಭಾಷೆ ಬೆಳೆಯಲು ಮತ್ತೊಂದು ಭಾಷೆ ಸಾಂಗತ್ಯ ಅಗತ್ಯ. ಭಾಷೆ ಮಧ್ಯೆ ಯಾವ ಗೋಡೆ ಇರಬಾರದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ‘ಭಾಷೆ ಮತ್ತು ಜೀವನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳಲ್ಲಿ ಭಾಷಾ ಶಕ್ತಿ ತುಂಬುವ ಕೆಲಸವನ್ನು ಕನ್ನಡ ಸಂಘಗಳು ಮಾಡಬೇಕು. ಗಡಿನಾಡಿನಲ್ಲಿ ಕನ್ನಡದ ಯಾತ್ರೆ ನಿರಂತರವಾಗಿ ನಡೆಸುವ ಪ್ರಯತ್ನಗಳಾಗಬೇಕು’ ಎಂದು ಹೇಳಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಡಿ.ಎನ್.ಪಾಟೀಲ, ಹಣಕಾಸು ಅಧಿ ಕಾರಿ ಎಂ.ಎ.ಸಪ್ನಾ, ಕನ್ನಡ ಸಂಘದ ಅಧ್ಯಕ್ಷ ಗಜಾನನ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-21-605624173

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.