ಬೆಳಗಾವಿ: ‘ಜಿಲ್ಲೆಯಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪತ್ರಗಳು, ತಾಳೆ ಗ್ರಂಥಗಳು, ಹಸ್ತಲಿಪಿಗಳು ಹಾಗೂ ಪ್ರಾಚೀನ ದಾಖಲೆಗಳ ಮಾಹಿತಿಯನ್ನು ಶೀಘ್ರವಾಗಿ ನೀಡಬೇಕು. ಡಿಜಿಟಲೀಕರಣ ಕಾರ್ಯಕ್ಕೆ ಸಂಬಂಧಿತ ಅಧಿಕಾರಿಗಳು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಶನ್ ತಿಳಿಸಿದರು.

ಜಿಲ್ಲಾಧಿಕಾರ ಕಚೇರಿ ಸಭಾಂಗಣದಲ್ಲಿ ಸೋಮವಾರ ಬೆಳಗಾವಿ ವಲಯದ ‘ಜ್ಞಾನ ಭಾರತಂ ಮಿಷನ್’ ತಂಡದ ಸಹಯೋಗದಲ್ಲಿ ಜ್ಞಾನ ಭಾರತಂ ಮಿಷನ್ ಪೋಸ್ಟರ್ಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕದ ಪ್ರಾಚೀನ ಹಸ್ತ ಪ್ರತಿಗಳ ಸಮೀಕ್ಷೆಯಡಿ ಡಿಜಿಟಲೀಕರಣ ಜೂನ್–2026 ರ ಅಂತ್ಯದ ವರೆಗೆ ನಡೆಯಲಿದೆ’ ಎಂದರು.

‘ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ದೇಶದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪತ್ರಗಳು, ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಿ ಡಿಜಿಟಲೀಕರಣ ಮಾಡುವ ಕೆಲಸ ನಡೆಯುತ್ತಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಶಾಶ್ವತವಾಗಿ ಉಳಿಸುವುದರ ಜೊತೆಗೆ ಸಾರ್ವಜನಿಕರಿಗೆ ಒಂದೇ ರಾಷ್ಟ್ರೀಯ ವೇದಿಕೆ ಮೂಲಕ ಪ್ರವೇಶ ಕಲ್ಪಿಸುವುದಾಗಿದೆ’ ಎಂದು ತಿಳಿಸಿದರು.

‘ಈ ಯೋಜನೆಯಡಿ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ ಮತ್ತು ಮೊಬೈಲ್ ಅಪ್ಲಿಕೇಶನ್ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಅಪ್ಲಿಕೇಶನ್ ಮೂಲಕ ದೇಶದಾದ್ಯಂತ ಇರುವ ಹಸ್ತಪ್ರತಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಿ ರಾಷ್ಟ್ರೀಯ ಹಸ್ತಪ್ರತಿ ಭಂಡಾರದಲ್ಲಿ ಸಂಗ್ರಹಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಹಂಚಿಕೊಳ್ಳುವ ಯೋಜನೆ ರೂಪಿಸಲಾಗಿದೆ’ ಎಂದೂ ಜಿಲ್ಲಾಧಿಕಾರಿ ವಿವರಿಸಿದರು.

ಹೆಚ್ಚವರಿ ಜಿಲ್ಲಾಧಿಕಾರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ಹಾಗೂ ಬೆಳಗಾವಿ ವಲಯದ ಜ್ಞಾನ ಭಾರತಂ ಮಿಷನ್ ತಂಡದ ಸದಸ್ಯರು, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-21-1197462846

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.