ಬೆಳಗಾವಿ: ‘ಯಾವುದೇ ಕೆಲಸದಲ್ಲಿ ನೈತಿಕತೆ ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಸಂಶೋಧನೆಯಲ್ಲಿಯೂ ನೈತಿಕತೆ ಅಗತ್ಯ’ ಎಂದು ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪಿ.ಜಿ.ತಡಸದ ಅಭಿಪ್ರಾಯಪಟ್ಟರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ಗ್ರಂಥಾಲಯ ವಿಜ್ಞಾನ ವಿಭಾಗವು ‘ಸಂಶೋಧನೆ ಮತ್ತು ಪ್ರಕಟಣೆಯ ನೀತಿಶಾಸ್ತ್ರ’ ವಿಷಯ ಕುರಿತು ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಸಂಶೋಧನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಇಲ್ಲದಿದ್ದರೆ, ಅದರ ಫಲಿತಾಂಶ ಸಮಾಜದ ದಾರಿ ತಪ್ಪಿಸಬಹುದು. ಹೀಗಾಗಿ ಸಂಶೋಧನಾ ವಿದ್ಯಾರ್ಥಿಗಳು ಕೇವಲ ಸಂಶೋಧನೆ ಪೂರ್ಣಗೊಳಿಸುವುದಕ್ಕಿಂತ, ಅದು ಎಷ್ಟು ನೈತಿಕ ರೀತಿಯಲ್ಲಿ ಪೂರ್ಣ ಗೊಂಡಿದೆ ಎಂಬುದುರ ಬಗ್ಗೆ ಗಮನಹರಿಸುವುದು ಮುಖ್ಯ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ವಿಶ್ವನಾಥ ಅವಟಿ, ಆಂತರಿಕ ಗುಣಮಟ್ಟದ ಭರವಸೆ ಕೋಶದ ನಿರ್ದೇಶಕ ಪ್ರೊ. ಆರ್.ಎನ್.ಮನಗೂಳಿ ಮಾತನಾಡಿದರು. ಬೆಂಗಳೂರಿನ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯ ಅಂತರಿಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಮಾಹಿತಿ ಕೇಂದ್ರದ ಮುಖ್ಯಸ್ಥ ಬಿ.ಎಸ್.ಶಿವರಾಮ, ಗ್ರಂಥಾಲಯ ವಿಜ್ಞಾನ ವಿಭಾಗದ ಮುಖ್ಯಸ್ಥ ಕಿರಣ ಸವಣೂರ, ರಮೇಶ್ ಕುರಿ ಇದ್ದರು. ಅಮೃತಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-1430321210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.