ಬೆಳಗಾವಿ: ‘ಶಾಲೆ ಹಾಗೂ ಅಂಗನವಾಡಿಗಳು ಮರು ಆರಂಭವಾಗುತ್ತಿರುವ ಕಾರಣ ಜಿಲ್ಲೆಯ ಎಲ್ಲ ಶಾಲೆ ಹಾಗೂ ಅಂಗನವಾಡಿಗಳ ಮೂಲ ಸೌಕರ್ಯಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ಅಗತ್ಯ ಸೌಕರ್ಯ ಕಲ್ಪಿಸಬೇಕು’ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿಗಳ ಪ್ರಾರಂಭೋತ್ಸವದ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿಡಿಯೊ ಸಂವಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಶಾಲೆ ಹಾಗೂ ಅಂಗನವಾಡಿಗಳ ಒಳ ಹಾಗೂ ಹೊರಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಆದ್ಯತೆ ನೀಡಬೇಕು. ಆಹಾರ ಪದಾರ್ಥಗಳ ದಾಸ್ತಾನು ಕೊಠಡಿಯನ್ನು ಶುಚಿಯಾಗಿಟ್ಟುಕೊಳ್ಳಬೇಕು. ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಕುಡಿಯುವ ನೀರು, ವಿದ್ಯುತ್ ಸೇರಿ ಇನ್ನಿತರೇ ಮೂಲಸೌಕರ್ಯಗಳನ್ನು ಒದಗಿಸಬೇಕು’ ಎಂದು ಸೂಚನೆ ನೀಡಿದರು.

ಕಟ್ಟಡಗಳ ಸ್ಥಿತಿಗತಿ ಪರಿಶೀಲಿಸಿ: ‘ಎಲ್ಲ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಸ್ಥಿತಿಗತಿಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಳೆಗಾಲ ಆರಂಭಕ್ಕೂ ಮೊದಲೇ ಪರಿಶೀಲಿಸಿ ಅಗತ್ಯಬಿದ್ದರೆ ಬೇರೆ ಕಟ್ಟಡಗಳಲ್ಲಿ ಸ್ಥಳಾಂತರಕ್ಕೆ ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು’ ಎಂದು ನಿರ್ದೇಶನ ನೀಡಿದರು.

‘ಕುಡಿಯುವ ನೀರನ್ನು ಎಫ್.ಟಿ.ಕೆ. ಕಿಟ್ ಮೂಲಕ ಪರಿಶೀಲಿಸಿ ನಂತರ ಪೂರೈಕೆ ಮಾಡಬೇಕು. ಶಾಲೆಗಳ ಸುತ್ತಮುತ್ತ ಅಪಾಯಕಾರಿ ವಿದ್ಯುತ್ ತಂತಿ, ವಿದ್ಯುತ್ ದೀಪ ಇತ್ಯಾದಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ’ ತಿಳಿಸಿದರು.

‘ಜೂನ್ 1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಎಲ್ಲ ಶಾಲೆಗಳಲ್ಲಿ ಸಂಭ್ರಮದಿಂದ ಆಚರಿಸಬೇಕು. ಯಾವ ಮಕ್ಕಳು ಕೂಡ ಶಾಲೆಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮನವೊಲಿಸಿ ಶಾಲೆಗೆ ಕರೆತರುವ ಕಾರ್ಯ ಮಾಡಬೇಕು. ಅಂಗನವಾಡಿಗಳಲ್ಲಿ ತಿಂಗಳ ಮೂರನೇ ಶನಿವಾರ ಹಾಗೂ ಶಾಲೆಗಳಲ್ಲಿ ತಿಂಗಳ 4ನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಎಲ್ಲ ಶಾಲೆ, ಅಂಗನವಾಡಿ, ಸರ್ಕಾರಿ ಕಚೇರಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಬೇಕು. ಮಕ್ಕಳಿಗೆ ಪರಿಸರದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಉಪ ಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-21-1292743784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.