ಬೆಳ್ಳಾವಿ: ಇಂದಿನ ಯುವ ಪೀಳಿಗೆಗೆ ಅಂತರ್ಜಾಲಕ್ಕಿಂತ ಅಂತರಾತ್ಮ ಮತ್ತು ಸೇವಾ ಮನೋಭಾವದ ಅರಿವು ಮುಖ್ಯ ಎಂದು ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ ಹೇಳಿದರು.

ಕಾರದ ಮಠದ ಆವರಣದಲ್ಲಿ ಸೋಮವಾರ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನಿಂದ ಆಯೋಜಿಸಿದ್ದ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಹದಿಹರೆಯದ ವಯಸ್ಸಿನಲ್ಲಿ ಅತ್ಯಂತ ಜಾಗರೂಕತೆಯಿಂದಇರಬೇಕು. ಮೊಬೈಲ್ ವ್ಯಾಮೋಹದಿಂದ ಹೊರ ಬರಬೇಕು. ತಂದೆ– ತಾಯಂದಿರನ್ನು ಗೌರವಿಸಬೇಕು ಎಂದು ಸಲಹೆ ಮಾಡಿದರು.

ವಿ–ಟೆಕ್ ಸೆಲ್ಯುಷನ್ಸ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಜಿ.ನಾಗಪ್ರಿಯ, ‘ಶಿಕ್ಷಣದ ಜತೆಗೆ ಸಂಸ್ಕಾರ, ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬ ಶಿಬಿರಾರ್ಥಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು’ ಎಂದರು.

ವೈಸಿರಿ ಕಾಲೇಜಿನ ಪ್ರಾಂಶುಪಾಲ ಹುಮೇರ ಪರ್ವೀನ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಇ.ಅರವಿಂದ, ಡಿ.ಸಂಜಯ್, ಎಸ್.ಅಭಿಲಾಷ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-17-1280612390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.