ಬೆಳ್ತಂಗಡಿ: ‘ಪ್ರತಿ ಮನೆಯೂ ಸಂಸ್ಕಾರಯುತ ಶಿಕ್ಷಣ ನೀಡುವ ವಿಶ್ವವಿದ್ಯಾಲಯವಾಗಬೇಕು. ಮಹಿಳೆ ತನ್ನನ್ನು ತಾನು ಅರಿತುಕೊಂಡರೆ ಯಾವುದೇ ಕಾರ್ಯವನ್ನು ಮಾಡಬಲ್ಲಳು. ಸಾಧನೆ ಮಾಡಿದಾಗ ಮಾತ್ರ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ. ಯಾವುದೇ ಸಂದರ್ಭದಲ್ಲಿ ನಮ್ಮತನವನ್ನು ಬಿಟ್ಟುಕೊಡಬಾರದು’ ಎಂದು ವಿಜಯಲಕ್ಷ್ಮೀ ಕಟೀಲು ಹೇಳಿದರು.

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದ ವತಿಯಿಂದ ಬೆಳ್ತಂಗಡಿಯಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಂತಿಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಪ್ರೊ. ತ್ರಿಶಾಲ ಜೈನ್ ಕೆ. ಎಸ್., ‘ದೇಶದ ನಾನಾ ಭಾಗಗಳಲ್ಲಿ ಆಳ್ವಿಕೆ ಮಾಡಿರುವ ಜೈನ ರಾಣಿಯರ ಧೈರ್ಯ, ಸಾಹಸ, ಚಾಣಾಕ್ಷತೆ, ಆಡಳಿತ ಶೈಲಿ ಪ್ರೇರಣಾದಾಯಕವಾಗಿದೆ. ಬಾಹ್ಯಾಕಾಶ ಯಾನ ಮಾಡಿ ಯಶಸ್ವಿಯಾದ ಸುನಿತಾ ವಿಲಿಯಮ್ಸ್ ಸಾಧನೆ ಮಹಿಳೆಯರಿಗೆ ಆದರ್ಶವಾಗಿದೆ’ ಎಂದರು.

ಪದ್ಮಾವತಿ ಬಳಂಜ ಸ್ವರಚಿತ ಕವನಗಳನ್ನು ವಾಚಿಸಿದರು. ಸಪ್ನಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾರ್ಯದರ್ಶಿ ರಾಜಶ್ರೀ ಎಸ್. ಹೆಗ್ಡೆ ಪ್ರಾಸ್ತಾವಿಕ ಮಾತನಾಡಿದರು. ಅನುಪಮಾ ಡಿ ಜೈನ್ ವಂದಿಸಿದರು. ಧವಳ ಹಾಗೂ ಸಾರಿಕಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-29-1488060595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.