ಬೇಲೂರು: ಕ್ರೀಡೆ ಎಂಬುದು ವಿದ್ಯಾರ್ಥಿ ಜೀವನದ ಬಹುಮುಖ್ಯ ಚಟುವಟಿಕೆಯಾಗಿದೆ ಎಂದು ಪುರಸಭೆ ಅಧ್ಯಕ್ಷ ಅಕ್ರಂ ಷರೀಫ್ ಹೇಳಿದರು.

ಇಲ್ಲಿನ ಜೂನಿಯರ್ ಕಾಲೇಜು ಆವರಣದಲ್ಲಿ, ಹಾಸನ ವಿಶ್ವವಿದ್ಯಾಲಯ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ, ಪದವಿ ಅಂತರಕಾಲೇಜು ವಿದ್ಯಾರ್ಥಿಗಳ ವಾಲಿಬಾಲ್ ಟೂರ್ನಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕಿದೆ ಎಂದರು.

ಪ್ರಾಂಶುಪಾಲ ಡಾ. ಮಹೇಶ್ ಮಾತನಾಡಿ, ವೈಡಿಡಿ ಪ್ರಥಮ ದರ್ಜೆ ಕಾಲೇಜು ಫಲಿತಾಂಶದಲ್ಲಿ ಪ್ರಥಮ ಸ್ಥಾನ ಮತ್ತು ಕ್ರೀಡಾಕೂಟದಲ್ಲಿ ಚಾಂಪಿಯನ್ ಶಿಪ್ ಪಡೆದಿದೆ ಎಂದರು. ಜಾನಪದ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ವೈ.ಎಸ್.ಸಿದ್ದೇಗೌಡ ಮಾತನಾಡಿ, ಕ್ರೀಡೆಯು ದೈಹಿಕ ಸದೃಢತೆ, ಮಾನಸಿಕ ಆರೋಗ್ಯ ಮತ್ತು ಶಿಸ್ತನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದರು. 18 ಕ್ಕೂ ಹೆಚ್ಚಿನ ಕಾಲೇಜುಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.

ಹಾಸನ ವಿಶ್ವವಿದ್ಯಾಲಯ ಸಂಯೋಜಕ ಪ್ರಕಾಶ್ ಕುಮಾರ್, ವೈ.ಡಿ.ಡಿ.ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹೆಬ್ಬಾಳು ಹಾಲಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಸಂಘಟನಾ ಕಾರ್ಯದರ್ಶಿ ಬಾಬು ಪ್ರಸಾದ್, ಚಂದ್ರನಾಯಕ್ , ವೈಡಿಡಿ ಕಾಲೇಜು ಅಧೀಕ್ಷಕ ಕೇಶವಕಿರಣ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಆರ್.ವೆಂಕಟೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-36-202377175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.