ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ‘ಪ್ರಸ್ತುತ ಜಾರಿಯಲ್ಲಿರುವಂತೆ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ಉರ್ದು, ಮರಾಠಿ ಮೊದಲಾದವನ್ನು ತೃತೀಯ ಭಾಷೆಯಾಗಿ ಮುಂದುವರಿಸಬೇಕು. ತ್ರಿಭಾಷಾ ನೀತಿಯು ದೇಶವನ್ನು ಒಂದುಗೂಡಿಸುವ ಭಾವನಾತ್ಮಕ ವಿಚಾರವಾಗಿದೆ’ ಎಂದು ಹೇಳಿದರು.

‘ತ್ರಿಭಾಷಾ ಸೂತ್ರ ಎಂಬುದು ಯಾವುದೇ ಭಾಷೆಯ ಹೇರಿಕೆಗಾಗಿ ಅಥವಾ ಯಾವುದೋ ಹೋರಾಟದ ಫಲವಾಗಿ ಬಂದಿಲ್ಲ. ಶಿಕ್ಷಣ ತಜ್ಞರ ಅನೇಕ ವರ್ಷಗಳ ಚಿಂತನೆಯಿಂದ ಬಂದಿದೆ. ಇದು ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವುದಕ್ಕೆ ಈ ನೀತಿ ಸಹಾಯಕವಾಗಿದೆ’ ಎಂದರು.

‘ಎಸ್ಎಸ್ಎಲ್ಸಿ ಪರೀಕ್ಷೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಲ್ಲಿ ದ್ವಿಭಾಷಾ ನೀತಿ ಎಂಬ ಗೊಂದಲ ಸೃಷ್ಟಿಸಿದೆ. ಈ ನೀತಿಯನ್ನು ಘೋಷಿಸುವ ಮೊದಲು ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕಿತ್ತು. ಅದನ್ನು ಬಿಟ್ಟು ಯಾರದೋ ಒತ್ತಡಕ್ಕೆ ಮಣಿದು, ಪರೀಕ್ಷೆಯ ಸಂದರ್ಭದಲ್ಲಿ ದ್ವಿಭಾಷಾ ನೀತಿಯನ್ನು ಅನುಷ್ಠಾನ ಮಾಡಲು ಹೊರಟಿರುವುದು ಸರಿಯಲ್ಲ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-4-1470447193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.