ಬೆಂಗಳೂರು: ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಿಂದ (ನ್ಯಾಕ್) ಎ+ ಶ್ರೇಣಿ ದೊರೆತಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾ ಲಯದ ಕುಲಪತಿ ಎಸ್.ವಿ. ಸುರೇಶ ತಿಳಿಸಿದ್ದಾರೆ.

‘ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯವು ನ್ಯಾಕ್ ಮಾನ್ಯತೆಗೆ ಅರ್ಜಿ ಸಲ್ಲಿಸಿತ್ತು. ಫೆಬ್ರುವರಿ 5ರಿಂದ 7ರವರೆಗೆ ನ್ಯಾಕ್ ಪರಿಶೀಲನಾ ಸಮಿತಿಯು ವಿಶ್ವ ವಿದ್ಯಾಲಯ ಹಾಗೂ ಇದರ ಅಧೀನದಲ್ಲಿರುವ ಕಾಲೇಜುಗಳಿಗೆ ಭೇಟಿ ನೀಡಿತ್ತು. ಕೃಷಿ ವಿಜ್ಞಾನ ಶಿಕ್ಷಣ, ಸಂಶೋಧನೆ, ವಿಸ್ತರಣೆ ಮತ್ತು ಆಡಳಿತದಲ್ಲಿ ವಿಶ್ವವಿದ್ಯಾಲಯ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಶೈಕ್ಷಣಿಕ ಗುಣಮಟ್ಟ, ಪರಿಣಾಮಕಾರಿ ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ನವೀನ ಬೋಧನಾ ವಿಧಾನಗಳಿಗೆ ಅದರ ಬದ್ಧತೆಯನ್ನು ಎತ್ತಿಹಿಡಿದಿದೆ’ ಎಂದು ಹೇಳಿದ್ದಾರೆ.

ಈ ಮಾನ್ಯತೆಯು ಮುಂದಿನ ಐದು ವರ್ಷಗಳವರೆಗೆ ಇರಲಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಎ+ ಮಾನ್ಯತೆ ಪಡೆದ ರಾಜ್ಯದ ಮೊದಲ ವಿಶ್ವ ವಿದ್ಯಾಲಯವಾಗಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.