ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಹಿಂದುಳಿದ ವಿದ್ಯಾರ್ಥಿಗಳಿಗೆ ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ಪ್ರತಿ ಜಿಲ್ಲೆಗೆ 15 ರಂತೆ ಒಟ್ಟು 500 ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ’ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದಕ್ಕಾಗಿ ₹15 ಕೋಟಿ ವೆಚ್ಚದಲ್ಲಿ 2 ವರ್ಷಗಳ ವಸತಿ ಸಹಿತ ಪ್ರಥಮ ಪಿಯುಮತ್ತು ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಶಿಕ್ಷಣದೊಂದಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು ಎಂದರು.

l ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಶಾಲಾ ಪೂರ್ವ ಶಿಕ್ಷಣ ಕಿಟ್ಗಳನ್ನು ಪ್ರತಿ ಕೇಂದ್ರಕ್ಕೆ ₹3,000 ಘಟಕ ವೆಚ್ಚದಲ್ಲಿ 69,922 ಅಂಗನವಾಡಿಗಳಿಗೆ ಒಟ್ಟು ₹20.98 ಕೋಟಿ ವೆಚ್ಚದಲ್ಲಿ ಖರೀದಿಸಲಾಗುವುದು.

l ಎಡಿಬಿ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯಡಿ ಕೇಂದ್ರದ ಆರ್ಥಿಕ ವ್ಯವಹಾರಗಳ ಇಲಾಖೆಯ ಸಾಲದ ಮಾತುಕತೆ ಸಿದ್ದತೆಯ ಮಾನದಂಡಗಳ ಅನ್ವಯ 53 ಸರ್ಕಾರಿ ಪದವಿ ಕಾಲೇಜುಗಳು, 14 ಸರ್ಕಾರಿ ಪಾಲಿಟೆಕ್ನಿಕ್ಗಳು, 5 ಉತ್ಕೃಷ್ಟತಾ ಕೇಂದ್ರಗಳು ಹಾಗೂ ಯೋಜನಾ ನಿರ್ವಹಣಾ ಘಟಕಕ್ಕೆ ₹802 ಕೋಟಿ ಮೊತ್ತದ ವಸ್ತುಗಳ ಮುಂಗಡ ಖರೀದಿಗೆ ಅನುಮೋದನೆ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಗಳಲ್ಲಿ ಹೊಸ ಯಂತ್ರೋಪಕರಣಗಳು ಮತ್ತು ಸಲಕರಣೆಗಳನ್ನು ₹90 ಕೋಟಿ ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನ

ಬೆಂಗಳೂರು ಕೇಂದ್ರ, ಧಾರವಾಡ ಕೇಂದ್ರ, ಬೆಳಗಾವಿ ಮತ್ತು ಬಳ್ಳಾರಿ ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಕಾರಾಗೃಹ ಇಲಾಖೆಗೆ ಸೇರಿದ ಜಮೀನುಗಳಲ್ಲಿ ಪೆಟ್ರೋಲ್ ಪಂಪ್ ಮತ್ತು ಮಾರಾಟ ಮಳಿಗೆ ಸ್ಥಾಪಿಸಲು ಒಪ್ಪಿಗೆ

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟದ ಹತ್ತಿರ ಕಬಿನಿ ನದಿಗೆ ಅಡ್ಡಾಗಿ ವಿಯರ್ ನಿರ್ಮಾಣ ಮಾಡುವ ₹15 ಕೋಟಿ ಕಾಮಗಾರಿಗೆ ಅನುಮೋದನೆ

ರಾಯಚೂರು ಜಿಲ್ಲೆ ರಾಯಚೂರು ಮತ್ತು ಮಾನ್ವಿ ತಾಲ್ಲೂಕು ವ್ಯಾಪ್ತಿಗೆ ಬರುವ ₹182.70 ಕೋಟಿ ವೆಚ್ಚದ ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-1966137578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.