ಬೆಂಗಳೂರು: ರಾಜ್ಯ ಸರ್ಕಾರ ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ಸೂತ್ರವನ್ನು ಕಡ್ಡಾಯಗೊಳಿಸಬೇಕು. ರಾಜ್ಯ ಶಿಕ್ಷಣ ನೀತಿಯನ್ನು 2026–27ನೇ ಸಾಲಿನ ಶೈಕ್ಷಣಿಕ ಹಂತದಿಂದಲೇ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ.

ಶಿಕ್ಷಣ ಹಕ್ಕು ಕಾಯ್ದೆ–2009ನ್ನು ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು. 8ನೇ ತರಗತಿಯವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಎಂಬುದು ಸೇರಿದಂತೆ 15 ನಿರ್ಣಯಗಳನ್ನು ವೇದಿಕೆಯ ಮಹಾ ಪೋಷಕ ವಿ.ಪಿ.ನಿರಂಜನಾರಾಧ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಆಯೋಜಿಸಿದ್ದ ರಾಜ್ಯ ಸಮಿತಿ ಸಭೆಯಲ್ಲಿ ಅಂಗೀಕರಿಸಲಾಯಿತು.

ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಿದರೆ ಹಲವು ಶಾಲೆಗಳು ವಿಲೀನವಾಗುತ್ತವೆ. ಇದರಿಂದ ಎಸ್ಡಿಎಂಸಿಗಳ ಸಂಖ್ಯೆಯೂ ಕಡಿಮೆ ಯಾಗುತ್ತವೆ. ಉತ್ತಮ ಎಸ್ಡಿಎಂಸಿ ಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡುವ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉತ್ತಮ ಪ್ರಶಸ್ತಿ ಪಡೆದ ಶಾಲೆಗಳ ಯಶೋಗಾಥೆಗಳ ಸಂಕಲನ ಹೊರ ತರಬೇಕು. ಅನುಭವಿ ಆಂಗ್ಲ ಭಾಷಾ ಶಿಕ್ಷಕರನ್ನು ನೇಮಿಸಬೇಕು. ತರಬೇತಿಯನ್ನು ನೀಡಬೇಕು. ಸರ್ಕಾರಿ ಶಾಲಾ–ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ 25ರಷ್ಟು ಸೀಟುಗಳನ್ನು ಮೀಸಲಿಡಬೇಕು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಸರ್ಕಾರಿ ನೌಕರರು ಮತ್ತು ಜನ ಪ್ರತಿನಿಧಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೇ ಸೇರಿಸುವಂತೆ ಕಾನೂನನ್ನು ರೂಪಿಸಬೇಕು ಎನ್ನುವುದು ವೇದಿಕೆಯ ಇತರೆ ನಿರ್ಣಯಗಳು.

ಸಭೆಗೆ ಚಾಲನೆ ನೀಡಿದ ಎಐಟಿಯುಸಿ ರಾಜ್ಯ ಘಟಕದ ಅಧ್ಯಕ್ಷ ಬಾಬು ಮ್ಯಾಥ್ಯೂ ಮಾತನಾಡಿ, ಪ್ರತಿ ಪಂಚಾಯಿತಿ ಹಂತದಲ್ಲೂ ಸಮನ್ವಯ ವೇದಿಕೆ ಕಾರ್ಯತಂತ್ರ ರೂಪಿಸಬೇಕು. ಎಸ್ಡಿಎಂಸಿ ಸಮನ್ವಯ ವೇದಿಕೆ ಗಟ್ಟಿಗೊಳಿಸಬೇಕು. ಶಾಲೆಗಳ ವಿಲೀನ ತಡೆಯಬೇಕು. ಶಾಲೆಗಳ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಮೊದಲು ಆಯಾ ಎಸ್ಡಿಎಂಸಿಗಳ ಜೊತೆ ಸಮಾಲೋಚನೆ ನಡೆಸಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-43-226691071

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.