ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಕೌಶಲ ಉತ್ತೇಜಿಸಲು ಮೇ 15 ಮತ್ತು 16ರಂದು ಕ್ಯಾಂಪಸ್-ಟು-ಕರಿಯರ್ (ಸಿ ಟು ಸಿ) ಶಿಕ್ಷಣ ಶೃಂಗ ಹಮ್ಮಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಬುಧವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅವರು, ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಕೌಶಲ ಕೋರ್ಸ್ಗಳನ್ನು ಪರಿಚಯಿಸುವ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದು, ಹೊಸ ಉದ್ಯೋಗ ಗಳನ್ನು ಸೃಷ್ಟಿಸುವುದು ‘ಕ್ಯಾಂಪಸ್ ಟು ಕರಿಯರ್’ ಶೃಂಗದ ಉದ್ದೇಶ. ಸರ್ಕಾರಿ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆಜಾಗತಿಕ ಮಟ್ಟ, ಕೈಗಾರಿಕಾ ವಲಯದಲ್ಲಿ ಅವಶ್ಯವಿರುವ ಕೌಶಲ ಶಿಕ್ಷಣ ನೀಡಲು ಅಗತ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಶೃಂಗಸಭೆಯಲ್ಲಿ ರಾಜ್ಯದ ಪ್ರಮುಖ ಕೈಗಾರಿಕಾ ಸಂಸ್ಥೆಗಳು, ಶಿಕ್ಷಣ ತಜ್ಞರು ಹಾಗೂ ಸರ್ಕಾರದ ಅಧಿಕಾರಿಗಳು ಒಂದೆಡೆ ಸೇರಿ ಚರ್ಚಿಸ ಲಿದ್ದಾರೆ. ಜಾಗತಿಕವಾಗಿ ಉನ್ನತ ಶಿಕ್ಷಣ ಸಾಕಷ್ಟು ಬದಲಾಗಿದ್ದು, ಬದಲಾದ ಪರಿಕಲ್ಪನೆಗೆ ಅನುಗುಣವಾಗಿ ವಿದ್ಯಾರ್ಥಿ ಗಳನ್ನು ಸಜ್ಜುಗೊಳಿಸುವುದು ಸರ್ಕಾರದ ಉದ್ದೇಶ ಎಂದು ವಿವರ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-51-214518029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.