ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೊದಲ ದಿನ ಸುಸೂತ್ರವಾಗಿ ನೆರವೇರಿತು.

ರಾಜ್ಯದ 745 ಕೇಂದ್ರಗಳಲ್ಲಿ ನಡೆದ ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆಗೆ ಶೇ 96 ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಒಂದು ಗಂಟೆಯ ಒಳಗೆ ಒಎಂಆರ್ ಶೀಟ್ಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಕೊನೆ ಕ್ಷಣದಲ್ಲಿ ಪ್ರವೇಶ ಪತ್ರ ಇಲ್ಲದೆ ಪರದಾಡಿದ, ನಿಗದಿತ ಪರೀಕ್ಷಾ ಕೇಂದ್ರಕ್ಕೆ ಹೋಗದೆ ಬೇರೊಂದು ಕೇಂದ್ರಕ್ಕೆ ಹೋಗಿದ್ದ ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಪರೀಕ್ಷೆ ಬರೆಯಿಸುವಲ್ಲಿ ಪರೀಕ್ಷಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ನ ಬಿಜಿಎಸ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯಬೇಕಿದ್ದ ಅನ್ವಿ ಸೋಜನ್ ಕೆಂಗೇರಿ ಸಮೀಪದ ಬಿಜಿಎಸ್ ಗ್ಲೋಬಲ್ ಕಾಲೇಜಿಗೆ ಹೋಗಿದ್ದರು. ಮಹಾಲಕ್ಷ್ಮಿ ಲೇಔಟ್ ಕಾಲೇಜಿಗೆ ಹೋಗಲು ತಡವಾಗುತ್ತದೆ ಎನ್ನುವ ಕಾರಣಕ್ಕೆ ಕೆಂಗೇರಿಯಲ್ಲೇ ವ್ಯವಸ್ಥೆ ಮಾಡಿಸಿ, ಪರೀಕ್ಷೆ ಬರೆಯಿಸಲಾಗಿದೆ. ಸಾಗರದ ಕಾಲೇಜಿನಲ್ಲಿ ಪರೀಕ್ಷೆ ಬರೆಯಬೇಕಿದ್ದ ಚಿನ್ಮಯಿ ಶಿವಮೊಗ್ಗದ ವಿಜ್ಞಾನ ಕಾಲೇಜಿಗೆ ಹೋಗಿದ್ದರು. ಕಾಲೇಜಿನ ಪ್ರಾಂಶುಪಾಲರು ಅಲ್ಲೇ ಇದ್ದ ವೀಕ್ಷಕರ ಕಾರಿನಲ್ಲಿ ಆ ಅಭ್ಯರ್ಥಿಯನ್ನು ಸಾಗರಕ್ಕೆ ಕಳುಹಿಸಿ, ಪರೀಕ್ಷೆ ಬರೆಯಲು ನೆರವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-1641736118

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.