ಬೆಂಗಳೂರು: ‘ಇದೇ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲು ಮಾಡುವ ಮಕ್ಕಳ ವಯೋಮಿತಿ ಸಡಿಲಿಕೆ ವಿಚಾರವನ್ನು ಮರು ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸಿ’ ಎಂದು ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ನಗರದ ಕೃಷ್ಣ ಗಣೇಶ್ ಸೇರಿದಂತೆ 6 ಜನರ ಪರವಾಗಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ರಜಾ ಕಾಲದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ವಯೋಮಿತಿ ವಿಚಾರದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಒಂದು ವಾರದೊಳಗೆ ಎಲ್ಲಾ ಆಯಾಮಗಳಲ್ಲೂ ಪರಿಶೀಲಿಸಿ ಆದೇಶ ಹೊರಡಿಸಿ’ ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

ಮನವಿ: ‘ಕಳೆದ ಶೈಕ್ಷಣಿಕ ವರ್ಷದ ಮಾದರಿಯಲ್ಲೇ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿ ಪ್ರವೇಶಕ್ಕೂ ಕನಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಿ 5 ವರ್ಷ 5 ತಿಂಗಳ ಮಕ್ಕಳಿಗೆ ಪ್ರವೇಶ ಅವಕಾಶ ಕಲ್ಪಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-1478112466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.