ಬೆಂಗಳೂರು: ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲ ಯದ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಇದೇ 19 ಮತ್ತು 20ರಂದು ಡಿಜಿಟಲ್ ಸಮಾಜದ ಯುಗದಲ್ಲಿ ಸಮಾಜಶಾಸ್ತ್ರ ಎಂಬ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರವನ್ನು ಆಯೋಜಿಸಿದೆ.

ಈ ಕಾರ್ಯಾಗಾರದಲ್ಲಿ ಡಿಜಿಟಲ್ ತಂತ್ರಜ್ಞಾನಗಳು ಸಮಾಜ, ಸಂಸ್ಕೃತಿ, ಸಂವಹನ, ಶಿಕ್ಷಣ, ಆಡಳಿತ ಹಾಗೂ ಮಾನವ ಸಂಬಂಧಗಳ ಮೇಲೆ ಉಂಟುಮಾಡುತ್ತಿರುವ ಪರಿಣಾಮಗಳ ಬಗ್ಗೆ ಚರ್ಚಿಸಲಾಗುತ್ತದೆ.

19ರಂದು ಬೆಳಿಗ್ಗೆ 10ಕ್ಕೆ ಜ್ಞಾನಜ್ಯೋತಿ ಸಭಾಂಗಣದ ಸೆಮಿನಾರ್ ಹಾಲ್ನಲ್ಲಿ ನಡೆಯುವ ಕಾರ್ಯಾಗಾರವನ್ನು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಉದ್ಘಾಟಿಸಲಿದ್ದಾರೆ. ವಿಶ್ವವಿದ್ಯಾಲಯದ ಕುಲಪತಿ ಬಿ. ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾ ವಿಭಾಗದ ಡೀನ್ ಸೋಮಶೇಖರ್ ಸಿ. ಮುಖ್ಯ ಭಾಷಣ ಮಾಡಲಿದ್ದು, ಸುಧಾ ಖೋಕಾಟೆ ಕೃಷ್ಣಮೂರ್ತಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-4-740227360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.