ಬೆಂಗಳೂರು: ಡೊನೇಷನ್ ನಿಯಂತ್ರಣಕ್ಕೆ ‘ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ’ವನ್ನು (ಡೊನೇಷನ್ ವಿರೋಧಿ ಸಮಿತಿ) ತಕ್ಷಣ ರಚಿಸಬೇಕು ಹಾಗೂ ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಪ್ರತಿಭಟನೆ ನಡೆಸಿತು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಪಾಲಕರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆಯನ್ನು ಶೀಘ್ರ ಕರೆಯಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಬಸವರಾಜ್ ಗುಳೇದಳ್ ಮಾತನಾಡಿ, ‘ಶಿಕ್ಷಣ ಸಂಸ್ಥೆಗಳು ಪ್ರತಿ ತಿಂಗಳಿಗೊಮ್ಮೆ ಪಾಲಕರ ಸಭೆ ಕರೆದು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವಂತೆ ನಿರ್ದೇಶಿಸಬೇಕು. ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ ರಚನೆ ಕುರಿತು 15 ದಿನದೊಳಗೆ ಪಾಲಕರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು. ಶಿಕ್ಷಣ ಇಲಾಖೆಯ ಮುಖ್ಯಸ್ಥರು, ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳ ಜಂಟಿ ಸಭೆ ಕರೆಯಬೇಕು’ ಎಂದು ಒತ್ತಾಯಿಸಿದರು.

ಬಳಿಕ ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲಾ ಡಿಡಿಪಿಐಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ಜಿಲ್ಲಾ ಅಧ್ಯಕ್ಷ ಅರ್ಪಿತಾ ಗ್ರೇಸಿ, ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಸಹ ಕಾರ್ಯದರ್ಶಿ ರಾಜಿ ಘಪೂರ್, ಜಿಲ್ಲಾ ಉಪಾಧ್ಯಕ್ಷ ಪ್ರಧಾನ್, ಜಿಲ್ಲಾ ಉಪಾಧ್ಯಕ್ಷ ಕಾವ್ಯ, ಜಿಲ್ಲಾ ಸಮಿತಿ ಸದಸ್ಯರಾದ ಪ್ರಭು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-4-2105237706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.