ಬೆಂಗಳೂರು: ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗಿನ ಸುಮಾರು 46 ಲಕ್ಷ ಮಕ್ಕಳಿಗೆ 2026–27ನೇ ಶೈಕ್ಷಣಿಕ ಸಾಲಿನಿಂದ ಮೊದಲ ಬಾರಿಗೆ ಉಚಿತವಾಗಿ ನೋಟ್ ಬುಕ್ಗಳನ್ನು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿವರೆಗೆ ಸುಮಾರು 38 ಲಕ್ಷ ಮಕ್ಕಳು ಹಾಗೂ ಪಿಯುಸಿಯಲ್ಲಿ ಸುಮಾರು 8 ಲಕ್ಷ ಮಕ್ಕಳು ಓದುತ್ತಿದ್ದು, ಅವರಿಗೆ ಈ ವರ್ಷದಿಂದ ಉಚಿತವಾಗಿ ನೋಟ್ಬುಕ್ಗಳನ್ನು ವಿತರಿಸಲಾಗುತ್ತದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಎಲ್ಕೆಜಿ ಮಕ್ಕಳಿಗೆ ಚಟುವಟಿಕೆ ಆಧಾರಿತ ಕಲಿಕೆಗೆ ಪೂರಕವಾದ ಪುಸ್ತಕಗಳ ಮುದ್ರಣ ಕಾರ್ಯ ಈಗಾಗಲೇ ಶುರುವಾಗಿದೆ. 1ನೇ ತರಗತಿಯಿಂದ ಪಿಯುಸಿವರೆಗೆ ನೋಟ್ಬುಕ್ಗಳನ್ನು ನೀಡಲು ಸುಮಾರು ₹80 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇದನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಭರಿಸಲು ಪ್ರಯತ್ನಿಸಲಾಗುತ್ತಿದೆ. ಇದು ಸಾಧ್ಯವಾಗದೆ ಇದ್ದರೆ ಬೇರೆ ರೂಪದಲ್ಲಿ ಅನುದಾನ ಒದಗಿಸಲಾಗುತ್ತದೆ.

ಸಮಗ್ರ ಶಿಕ್ಷಣ ಕರ್ನಾಟಕದ ಅಡಿ ಈ ವರ್ಷ ₹1,816 ಕೋಟಿ ಅನುದಾನ ನಿಗದಿಯಾಗಿದೆ. ಇದರಲ್ಲಿ ಯಾವ, ಯಾವ ಯೋಜನೆಗಳಿಗೆ ಎಷ್ಟು ಹಣ ಖರ್ಚು ಮಾಡಬೇಕು ಎಂದು ಕ್ರಿಯಾ ಯೋಜನೆ ರೂಪಿಸಲಾಗಿದೆ. ಮೇ ತಿಂಗಳ ಮೊದಲ ವಾರದಲ್ಲಿ ನಡೆಯುವ ಯೋಜನಾ ಅನುಮೋದನೆ ಮಂಡಳಿ (ಪಿಎಬಿ) ಸಭೆಯಲ್ಲಿ ಒಪ್ಪಿಗೆ ಪಡೆದ ನಂತರ, ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದು ತಿಳಿಸಿದರು. ಇದರಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಕ್ರಮವಾಗಿ ಶೇ 80:20ರಷ್ಟು ಇದೆ. ಶಿಕ್ಷಕರ ಸಂಬಳಕ್ಕೆ ₹600 ಕೋಟಿ ನಿಗದಿಯಾಗಿದೆ. ಇದನ್ನು ಹೊರತುಪಡಿಸಿ ಉಳಿದ ಹಣವನ್ನು ಗ್ರಂಥಾಲಯಗಳಿಗೆ, ಶೌಚಾಲಯಗಳ ನಿರ್ವಹಣೆ, ಮಕ್ಕಳಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರ, ಒಂದರಿಂದ 8ನೇ ತರಗತಿವರೆಗಿನ ಅನುದಾನಿತ ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕ ನೀಡುವುದು ಇತ್ಯಾದಿ ಕಾರ್ಯಕ್ರಮಗಳಿಗೆ ವೆಚ್ಚ ಮಾಡಲು ನಿರ್ಧರಿಸಲಾಗಿದೆ.

ಪಿಎಂಶ್ರೀ ಯೋಜನೆ: ರಾಜ್ಯದಲ್ಲಿರುವ 5,190 ಪಿಎಂಶ್ರೀ ಶಾಲೆಗಳಿಗೆ ಈ ವರ್ಷ ₹318 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಇದರಲ್ಲಿ ಯಾವುದಕ್ಕೆ, ಎಷ್ಟು ಹಣ ವೆಚ್ಚ ಮಾಡಬೇಕು ಎಂದು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಇದೇ 27ರಂದು ನಡೆಯುವ ಯೋಜನಾ ಅನುಮೋದನೆ ಮಂಡಳಿ (ಪಿಎಬಿ) ಸಭೆಯಲ್ಲಿ ಒಪ್ಪಿಗೆ ಪಡೆದ ನಂತರ 2026–27ನೇ ಸಾಲಿನ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ.

ಕಳೆದ ವರ್ಷ ಪಿಎಂಶ್ರೀ ಯೋಜನೆಯಡಿ ₹290 ಕೋಟಿ ಅನುದಾನ ನೀಡಲಾಗಿತ್ತು. ಅದಕ್ಕೆ ಹೋಲಿಸಿದರೆ ಈ ವರ್ಷ ₹28 ಕೋಟಿ ಹೆಚ್ಚಿಗೆ ಅನುದಾನ ನಿಗದಿಯಾಗಿದೆ. ಪಿಎಂಶ್ರೀ ಶಾಲೆಗಳನ್ನು ಕೇಂದ್ರ ಸರ್ಕಾರವೇ ಗುರುತಿಸಿದೆ. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದು, ಪ್ರಯೋಗಾಲಯ, ಆಟದ ಮೈದಾನ ಇತ್ಯಾದಿಗಳ ಜೊತೆಗೆ ಯೋಗ, ಸಂಗೀತ, ನೃತ್ಯ, ಕೌಶಲ, ಕಂಪ್ಯೂಟರ್ ಶಿಕ್ಷಣವನ್ನು ಕಲಿಸಲಾಗುತ್ತಿದೆ. ಇದಕ್ಕಾಗಿಯೇ ವಿಷಯವಾರು ಪ್ರತ್ಯೇಕ ಶಿಕ್ಷಕರು ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1960639600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.