ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್ಎಫ್ಐ ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

ಎಸ್ಎಫ್ಐ ರಾಜ್ಯ ಅಧ್ಯಕ್ಷ ಎನ್. ಶಿವಪ್ಪ ಮಾತನಾಡಿ, ‘ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅನೇಕ ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಒಂದು ದೇಶ–ಒಂದು ಪರೀಕ್ಷೆ’ ಎಂಬ ಹೆಸರಿನಲ್ಲಿ ಜಾರಿಯಾಗಿರುವ ನೀಟ್ ಇಂದು ಬಡ, ಗ್ರಾಮೀಣ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಅನ್ಯಾಯ ಮಾಡುವ ವ್ಯವಸ್ಥೆಯಾಗಿ ಮಾರ್ಪಟ್ಟಿದೆ’ ಎಂದು ಆರೋಪಿಸಿದರು

ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಮಾತನಾಡಿ, ‘ಕೇಂದ್ರಿಕೃತ ಪರೀಕ್ಷೆಯಿಂದ ವಿದ್ಯಾರ್ಥಿಯ ಪ್ರತಿಭೆಯನ್ನು ಅಳೆಯಲು ಸಾಧ್ಯವಿಲ್ಲ. ಶಿಕ್ಷಣ ಹಣ ಇದ್ದವರಿಗೆ ಮಾತ್ರ ಎಂಬಂತಾಗಿದೆ. ಇದರಲ್ಲಿಯೂ ಕೆಲವು ಪೋಷಕರು ಮಕ್ಕಳ ಭವಿಷ್ಯಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸಿ ಸಿಕ್ಕಿಬಿದ್ದಿದ್ದಾರೆ’ ಎಂದರು.

ರಾಜ್ಯ ಉಪಾಧ್ಯಕ್ಷ ದೊಡ್ಡ ಬಸವರಾಜ್ ಮಾತನಾಡಿ, ‘ವೈದ್ಯಕೀಯ ಸೀಟುಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ಕೊಡಬೇಕು ಹಾಗೂ ರಾಜ್ಯಕ್ಕೆ ಕೋಟಾ ನೀಡಬೇಕು. ಇಲ್ಲದಿದ್ದರೆ ಕೆಲವೇ ರಾಜ್ಯದ ವಿದ್ಯಾರ್ಥಿಗಳು ಆಯ್ಕೆಯಾಗುವ ಸಂಭವ ಹೆಚ್ಚು ಇದೆ. ವೈದ್ಯಕೀಯ ಪರೀಕ್ಷೆಗಳನ್ನು ರಾಜ್ಯ ಸರ್ಕಾರವೇ ನಡೆಸಿ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ನೀಟ್ ತರಬೇತಿ ನೀಡಬೇಕು. ಶಾಲೆ ಹಾಗೂ ಕಾಲೇಜುಗಳಲ್ಲಿ ಮಾನಸಿಕ ಆರೋಗ್ಯ ಸಲಹಾ ಕೇಂದ್ರ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು. ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷರಾದ ಕಾವ್ಯ, ಪ್ರಧಾನ್, ಸಹ ಕಾರ್ಯದರ್ಶಿ ಮಣಿಭಾರಧಿ, ರಾಜಿ ಘಫೂರ್, ಎನ್. ಪರಿವರ್ತನಾ, ಪದಾಧಿಕಾರಿಗಳಾದ ಸೌಮ್ಯಾ. ಕೀರ್ತನಾ, ಸಂಜೀವ್ ಸಿಂಗ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-4-1888651049

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.