ಬೆಂಗಳೂರು: ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರ 142ನೇ ಜಯಂತಿ ಪ್ರಯುಕ್ತ ಜೂನ್ 4ರ ಬೆಳಗ್ಗೆ 11 ಗಂಟೆಗೆ ನಗರದ ಟೌನ್ಹಾಲ್ ಸಭಾಂಗಣದಲ್ಲಿ ಪರಿವರ್ತನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮತಾ ಸೈನಿಕ ದಳ ಅಧ್ಯಕ್ಷ ಎಂ.ವೆಂಕಟಸ್ವಾಮಿ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ರಮೇಶ್ ಅವರಿಗೆ 2026ನೇ ಸಾಲಿನ ನಾಲ್ವಡಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯು ₹25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಹೊಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಸಚಿವ ಜಿ.ಪರಮೇಶ್ವರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಸಾಹಿತಿ ಇಂದಿರಾ ಕೃಷ್ಣಪ್ಪ, ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ, ಚಿಂತಕ ಹ.ರ.ಮಹೇಶ್ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ದಳದ ಕಾರ್ಯದರ್ಶಿ ಅಂಬರೀಶ್, ಪದಾಧಿಕಾರಿಗಳಾದ ನಾಗರತ್ನ, ಜಿ.ಪಿ.ಪ್ರಶಾಂತ್, ಚಂದ್ರಶೇಖರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-4-1808189273

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.