ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಮಂಗಳವಾರ (ಏ.21) ಆರಂಭವಾಗಲಿದೆ.

ಜಿಲ್ಲಾ ಹಂತಗಳಲ್ಲಿ ಜ್ಯೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಪ್ರಕ್ರಿಯೆ ಆರಂಭಿಸಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ವರ್ಗಾವಣಾ ತಂತ್ರಾಂಶದಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳಿಗೆ ಅನುಗುಣವಾಗಿ ಬಡ್ತಿ ನೀಡಬೇಕು. ಸುಳ್ಳು ದಾಖಲೆ ಸಲ್ಲಿಸಿ ಬಡ್ತಿ ಪಡೆಯುವ ಪ್ರಕರಣಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಬಡ್ತಿ ನಿರಾಕರಿಸುವ ಶಿಕ್ಷಕರಿಂದ ಕಡ್ಡಾಯವಾಗಿ ಮುಚ್ಚಳಿಕೆ ಬರೆಯಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ಹೇಳಿದೆ.

ಬಡ್ತಿಗೆ ಅರ್ಹರಾದವರ ಪಟ್ಟಿ ಪ್ರಕಟಿಸಿದ ನಂತರ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಬೇಕು. ಎಲ್ಲ ಪ್ರಕ್ರಿಯೆಗಳನ್ನೂ ಏ.29ರ ಒಳಗೆ ಮುಕ್ತಾಯ ಮಾಡಬೇಕು ಎಂದು ಸೂಚಿಸಲಾಗಿದೆ.

ಹೊಸ ಮಾರ್ಗಸೂಚಿ ಪ್ರಕಾರ ಮೂರು ಹುದ್ದೆಗಳಿದ್ದರೆ ಎರಡು ಹುದ್ದೆಗಳು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮತ್ತು ಒಂದು ಹುದ್ದೆ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಮೀಸಲಾಗಿರುತ್ತದೆ. ಪದೋನ್ನತಿಗೆ ಪರಿಗಣಿಸಲು ಎರಡೂ ವೃಂದದ ಶಿಕ್ಷಕರು ಕನಿಷ್ಠ 12 ವರ್ಷಗಳ ಕೆಲಸ ಪೂರೈಸಿರಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-1274397024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.