ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಹೆಸರಿನಲ್ಲಿ ಕಡ್ಡಾಯ ಇಂಗ್ಲಿಷ್ ಮಾಧ್ಯಮ ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

‘ಇಂಗ್ಲಿಷ್ ಮಾಧ್ಯಮ ಕಡ್ಡಾಯಎಂದು ಹೇರುವ ಬದಲು ಕನ್ನಡಮಾಧ್ಯಮ ಆಯ್ಕೆ ಸ್ವಾತಂತ್ರ್ಯವನ್ನು ಉಳಿಸಬೇಕು. ಇದು ಸ್ಥಗಿತಗೊಳಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಆಗ್ರಹಿಸಿದರು.

ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯ ಎನ್.ಕೆ. ತುಳಜಾರಾಮ್ ಮಾತನಾಡಿ, ‘ನಾವು ಇಂಗ್ಲಿಷ್ ಮಾಧ್ಯಮ ವಿರೋಧಿಗಳಲ್ಲ. ಆದರೆ, ಕನ್ನಡ ಭಾಷೆ ಕಸಿದು ಇಂಗ್ಲಿಷ್ ಮಾಧ್ಯಮ ಕಡ್ಡಾಯಗೊಳಿಸುವುದನ್ನು ಒಪ್ಪುವುದಿಲ್ಲ’ ಎಂದರು.

‘ದಶಕಗಳ ಕಾಲ ಕನ್ನಡದಲ್ಲಿ ಬೋಧಿಸಿದ ಶಿಕ್ಷಕರಿಗೆ ಕೇವಲ ಐದು ದಿನಗಳ ಅರೆಬರೆ ಆನ್ಲೈನ್ ತರಬೇತಿ ನೀಡಿ ಇಂಗ್ಲಿಷ್ನಲ್ಲಿ ಪಾಠ ಮಾಡಲು ಸೂಚಿಸುವುದು ಅವೈಜ್ಞಾನಿಕ. ಇದು ಖಾಸಗಿ ಶಾಲೆಗಳ ಮುಂದೆ ಸರ್ಕಾರಿ ಶಾಲಾ ಮಕ್ಕಳನ್ನು ದುರ್ಬಲರನ್ನಾಗಿಸುವ ತಾರತಮ್ಯದ ನಡೆಯಾಗಿದೆ’ ಎಂದು ಟೀಕಿಸಿದರು.

ಸಂಘಟನೆ ರಾಜ್ಯ ಅಧ್ಯಕ್ಷೆ ಅಶ್ವಿನಿ ಕೆ.ಎಸ್, ಕಾರ್ಯದರ್ಶಿ ಅಜಯ್ ಕಾಮತ್, ಸದಸ್ಯೆ ಶಿಲ್ಪಾ ಬಿ.ಕೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-561613089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.