ಬೆಂಗಳೂರು: ‘ಬಾಲ್ಯದಲ್ಲಿಯೇ ಮಕ್ಕಳ ವ್ಯಕ್ತಿತ್ವ ವಿಕಸನಗೊಳ್ಳಲು ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ’ ಎಂದು ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಹೇಳಿದರು.

ಹಲಸೂರಿನ ರಾಮಕೃಷ್ಣ ಮಠದಲ್ಲಿ ಆಯೋಜಿಸಿರುವ ವಸಂತ ವಿಹಾರ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು

ರಾಮಕೃಷ್ಣ ಮಠದ ಹಲಸೂರು ಶಾಖೆ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದ ಮಹಾರಾಜ್ ಮಾತನಾಡಿ, ‘ವಸಂತ ವಿಹಾರ ಶಿಬಿರವು ಮೇ 10ರವರೆಗೆ ನಡೆಯಲಿದ್ದು, ರಾಮಕೃಷ್ಣ ಪರಮಹಂಸ, ಶಾರದಾಮಾತೆ, ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ತಿಳಿಸಿಕೊಡಲಾಗುತ್ತದೆ’ ಎಂದು ಹೇಳಿದರು.

ಕೆ.ಭಾನುಮೂರ್ತಿ ವಿಶೇಷ ಉಪನ್ಯಾಸ ನೀಡಿದರು. ಮುಂದಿನ ಎರಡು ವಾರ ಶಿಬಿರದಲ್ಲಿ ನಿತ್ಯ ಹಲವು ಚಟುವಟಿಕೆಗಳು ಇರಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-4-1384451696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.