ಬೆಂಗಳೂರು: ವಿಶೇಷ ಭತ್ಯೆ (ನಾನ್ ಪ್ರಾಕ್ಟಿಸಿಂಗ್ ಅಲೋವೆನ್ಸ್) ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ಕೆವಿಎಎಫ್ಎಸ್ಯು) ಶಿಕ್ಷಕರ ಸಂಘ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ವಿಶೇಷ ಭತ್ಯೆಯು 7ನೇ ವೇತನ ಆಯೋಗ, ಐಸಿಎಆರ್ ಮತ್ತು ಯುಜಿಸಿ ಮಾರ್ಗಸೂಚಿಗಳ ಅನ್ವಯ 2019ರಿಂದ ಜಾರಿಯಲ್ಲಿದೆ. ಸರ್ಕಾರದ ವಿವಿಧ ಇಲಾಖೆಗಳ ಅನುಮೋದನೆಯೊಂದಿಗೆ ಇದನ್ನುಜಾರಿಗೆ ತರಲಾಗಿದೆ. ಭತ್ಯೆ ಸ್ಥಗಿತಗೊಳಿಸಿರುವುದು ಬೋಧಕ ವರ್ಗದ ಆರ್ಥಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಪಶುವೈದ್ಯಕೀಯ ಶಿಕ್ಷಕರು ಖಾಸಗಿ ವೃತ್ತಿಯಿಂದ ದೂರವಿದ್ದು, ಕೇವಲ ಬೋಧನೆ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಈ ಭತ್ಯೆ ಅತ್ಯಗತ್ಯವಾಗಿದೆ. ಈಗಾಗಲೇ ವಿಶ್ವವಿದ್ಯಾಲಯದಲ್ಲಿ ಬೋಧಕರ ಕೊರತೆಯಿದ್ದು, ಈ ಭತ್ಯೆ ಸ್ಥಗಿತಗೊಂಡಿರುವುದರಿಂದ ಭವಿಷ್ಯದಲ್ಲಿ ಪ್ರತಿಭಾವಂತರು ಈ ಕ್ಷೇತ್ರಕ್ಕೆ ಬರಲು ಹಿಂದೇಟು ಹಾಕಬಹುದು. ಹಾಗಾಗಿ, ಏಪ್ರಿಲ್ 21ರ ಆದೇಶ ಹಿಂಪಡೆದು, ಬಾಕಿ ಇರುವ ಎರಡು ತಿಂಗಳ ವೇತನವನ್ನು ತಕ್ಷಣವೇ ಪಾವತಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘ ಎಚ್ಚರಿಕೆ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-4-1448532972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.