ಬೆಂಗಳೂರು: ‘ಕಾಲೇಜು ದಿನಗಳಲ್ಲಿ ಸಿಗುವ ವೇದಿಕೆಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಪ್ರತಿಭೆಯನ್ನು ಪ್ರದರ್ಶಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕುಲಪತಿ ಎಸ್. ವಿದ್ಯಾಶಂಕರ್ ಹೇಳಿದರು.

ವಿಟಿಯು ಮತ್ತು ಆಚಾರ್ಯ ತಾಂತ್ರಿಕ ಮಹಾವಿದ್ಯಾಲಯ ಸಹಯೋಗದೊಂದಿಗೆ ಆಯೋಜಿಸಿದ್ದ 25ನೇ ವಿಟಿಯು ಯುವಜನೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ವಿಟಿಯು ಪಠ್ಯಕ್ರಮ ಮಾತ್ರವಲ್ಲ, ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲಿದೆ. ಇದು ದೇಶದಲ್ಲಿ ಹೆಚ್ಚು ಪ್ರಾಮುಖ್ಯವನ್ನು ಪಡೆದಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾವು ಮೊದಲ ಸೆಮಿಸ್ಟರ್ನಿಂದಲೇ ಐಡಿಯಾ ಲ್ಯಾಬ್ ತಂದಿದ್ದೇವೆ. ಎಲ್ಲರೂ ಚೆನ್ನಾಗಿ ಓದಬೇಕು. ಶೇಕಡ 80ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ’ ಎಂದರು.

‘ಈ ಯುವಜನೋತ್ಸವ ಸಾಂಸ್ಕೃತಿಕ ಮತ್ತು ತಂತ್ರಜ್ಞಾನ ಆಧಾರಿತ ಸ್ಪರ್ಧೆಗಳ ಹಬ್ಬ. ವಿಟಿಯು ವ್ಯಾಪ್ತಿಯಲ್ಲಿರುವ 220 ಎಂಜಿನಿಯರಿಂಗ್ ಕಾಲೇಜುಗಳಿಂದ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು.

ವಿಟಿಯು ಬೆಂಗಳೂರು ಪ್ರಾದೇಶಿಕ ಕಚೇರಿಯ ನಿರ್ದೇಶಕ ಎಚ್.ಆರ್. ಸುದರ್ಶನ ರೆಡ್ಡಿ, ಆಚಾರ್ಯ ವಿದ್ಯಾಸಂಸ್ಥೆಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಬಿ.ಎಂ. ಭೂಷಣ್, ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಮರಿಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-15-1881670569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.