ಬೆಟ್ಟದಪುರ: ಡೆಂಗಿ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿ, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ರವಿ ಎಚ್.ಎಸ್. ಸಲಹೆ ನೀಡಿದರು.

ಸಮೀಪದ ಬೆಟ್ಟದತುಂಗ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಡಿ.ಜಿ. ಕೊಪ್ಪಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ನಡೆದ ಡೆಂಗಿ ವಿರೋಧಿ ಮಾಸಾಚರಣೆಯಲ್ಲಿ ಮಾತನಾಡಿದರು.

ಈಡೀಸ್ ಇಜಿಪ್ಟೈ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಡೆಂಗಿ ಹರಡುತ್ತದೆ. ಸೊಳ್ಳೆಗಳು ಸಾಮಾನ್ಯವಾಗಿ ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಸೋಂಕಿತ ಸೊಳ್ಳೆ ಆರೋಗ್ಯವಂತಹ ವ್ಯಕ್ತಿಗೆ ಕಚ್ಚಿದಾಗ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಿಳಿಸಿದರು.

ಮನೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಸಂಗ್ರಹಿಸುವ ಪಾತ್ರೆಗಳನ್ನು ವಾರಕ್ಕೆ ಎರಡು ಬಾರಿ ತೊಳೆದು ಒಣಗಿಸಿ ಮುಚ್ಚಿಡಬೇಕು. ಒಡೆದ ಬಾಟಲಿ, ಟೈರ್, ತೆಂಗಿನ ಚಿಪ್ಪು ಸೇರಿದಂತೆ ನೀರು ನಿಲ್ಲುವ ಘನತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಬಹುದು ಎಂದು ಸಲಹೆ ನೀಡಿದರು.

ಸಮುದಾಯ ಆರೋಗ್ಯ ಅಧಿಕಾರಿ ಅನಿಲ್, ಅಂಗನವಾಡಿ ಕಾರ್ಯಕರ್ತೆ ರೇಣುಕಾ, ಆಶಾ ಕಾರ್ಯಕರ್ತೆ ಹೇಮಾ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-38-753765475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.