ಬೆಟ್ಟದಪುರ: ‘ಸಮಾಜದ ಸಮಗ್ರ ಅಭಿವೃದ್ಧಿಗೆ ಶಿಕ್ಷಣವೇ ಮೂಲಸ್ತಂಭ, ಪ್ರತಿಯೊಬ್ಬರೂ ಅದರ ಸದುಪಯೋಗ ಪಡೆದು ಜೀವನವನ್ನು ಅರ್ಥಪೂರ್ಣವಾಗಿಸಿಕೊಳ್ಳಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ನಿತಿನ್ ವೆಂಕಟೇಶ್ ಹೇಳಿದರು.

ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಶಿಕ್ಷಣವು ವ್ಯಕ್ತಿಯ ಬುದ್ಧಿವಂತಿಕೆ, ಚಿಂತನೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಪ್ರಮುಖ ಸಾಧನ, ಅದನ್ನು ಬಳಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದರು.

ಪಿರಿಯಾಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಂಜುಂಡಸ್ವಾಮಿ ಮಾತನಾಡಿ, ‘ಶಿಕ್ಷಣವು ಕೇವಲ ಉದ್ಯೋಗ ಪಡೆಯಲು ಮಾತ್ರವಲ್ಲ, ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಅತ್ಯಗತ್ಯ, ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಹೊಂದಿದೆ. ವಿದ್ಯಾರ್ಥಿಗಳು ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು’ ಎಂದು ಕರೆ ನೀಡಿದರು.

ಕುಂಜಪ್ಪ ಕಾರ್ನಾಡ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೃಷ್ಣೇಗೌಡ, ಐಕ್ಯೂಎಸಿ ಸಂಚಾಲಕ ಶಾಕಿರ್, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಪದ್ಮಾವತಿ ಪಿ, ಗ್ರಂಥಾಲಯ ಮೇಲ್ವಿಚಾರಕ ಪ್ರಶಾಂತ್, ಉಪನ್ಯಾಸಕ ಜಲೇಂದ್ರ, ರಘುವೀರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-38-1108933930

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.