ಬೆಟ್ಟದಪುರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.

ಉಪ ಪ್ರಾಂಶುಪಾಲ ನಟರಾಜು ಬಿ.ಆರ್., ಮಾತನಾಡಿ, ‘ಶಿಕ್ಷಣವು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಬೇಕು. ಜ್ಞಾನಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡಾಗ ಬದುಕು ಹಸನಾಗುತ್ತದೆ ಎಂದು ಹೇಳಿದರು.

‘ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ವತೋಮುಖ ಪ್ರಗತಿ ಸಾಧಿಸಬೇಕು. ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದರು.

ಹಿರಿಯ ಶಿಕ್ಷಕ ನಿಂಗರಾಜು, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಈ.ಬಿ. ವೆಂಕಟೇಶ್, ಸತೀಶ್ ಕುಮಾರ್, ಮೋಹನ್ ಕುಮಾರ್, ಗೊರಳ್ಳಿ ಜಗದೀಶ್, ಆಲನಹಳ್ಳಿ ಕೆಂಪರಾಜು, ಕಟ್ಟೇಪುರ ಮಂಜಣ್ಣ, ಮಮತಾ ನಾಯಕ್, ಬಿ.ಎನ್. ಜ್ಯೋತಿ, ರಾಘವೇಂದ್ರ ಶಾಸ್ತ್ರಿ, ಕಾವ್ಯಶ್ರೀ ಹಾಗೂ ಕಾಂತರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-1324910545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.