ಭದ್ರಾವತಿ: ‘ಶೋಷಿತರ ಕಲ್ಯಾಣಕ್ಕೆ ಜೀವನವನ್ನೇ ಮುಡಿಪಾಗಿಟ್ಟ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಬದುಕು ಹಾಗೂ ಸಾಧನೆ ಅನುಕರಣೀಯ’ ಎಂದು ವಿಐಎಸ್ಎಲ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯ ಮಹಾಪ್ರಬಂಧಕ ಬಿ. ವಿಶ್ವನಾಥ್ ಅಭಿಪ್ರಾಯಪಟ್ಟರು.

ನಗರದ ಸೈಲ್ ವಿಐಎಸ್ಎಲ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಿರಂತರ ಓದು ಹಾಗೂ ಅಧ್ಯಯನದಿಂದ ಅಪಾರ ಪಾಂಡಿತ್ಯ ಸಂಪಾದಿಸಿದ್ದ ಅಂಬೇಡ್ಕರ್, ಭಾರತೀಯ ಸಂವಿಧಾನ ರಚನೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸಿದರು. ಬಾಲ್ಯದಿಂದಲೇ ಸಾಮಾಜಿಕವಾಗಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಿದರೂ ಛಲ ಬಿಡದೆ ಶೋಷಿತರ ಸಬಲೀಕರಣಕ್ಕಾಗಿ ನಡೆಸಿದ ಹೋರಾಟ ಪ್ರಶಂಸನೀಯ’ ಎಂದರು.

ವಿಐಎಸ್ಎಲ್ ಪ್ರಭಾರ ಕಾರ್ಯನಿರ್ವಾಹಕ ನಿರ್ದೇಶಕ ಟಿ. ರವಿಚಂದ್ರನ್, ಮಹಾ ಪ್ರಬಂಧಕರಾದ ಎಂ. ಸುಬ್ಬರಾವ್, ಸುಂದರ ವಡಿವೇಲು, ಕಾರ್ಮಿಕರ ಸಂಘದ ಅಧ್ಯಕ್ಷ ಪಿ. ಅಮೃತ್ ಕುಮಾರ್, ಅಧಿಕಾರಿಗಳ ಸಂಘದ ಅಧ್ಯಕ್ಷ ಅಜಯ್ ಡಿ. ಸೋಂಕುವಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ವಾಚಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-1478234482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.