ಭಾಲ್ಕಿ: ‘ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯವಾಗಿದೆ’ ಎಂದು ಯೋಗ ಪ್ರಮುಖ ಗುರುನಾಥ ರಾಜಗೀರಾ ಹೇಳಿದರು.

ಪಟ್ಟಣದ ಸಂಸ್ಕಾರ ಪಬ್ಲಿಕ್ ಶಾಲೆಯಲ್ಲಿ ನಡೆದ ವಾಷಿಕೋತ್ಸವ ಮತ್ತು ಸಂಸ್ಕಾರ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂಸ್ಕಾರ ಪಬ್ಲಿಕ್ ಶಾಲೆಯು ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಸ್ಪರ್ಧಾ ಜಗತ್ತಿನ ಶಿಕ್ಷಣಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಮಕ್ಕಳಲ್ಲಿ ದೇಶ ಭಕ್ತಿಯನ್ನು ಬೆಳೆಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ’ ಎಂದು ಹೇಳಿದರು.

ಮೆಹಕರ ಪಿಎಸ್ಐ ಸಿದ್ದವೀರರೆಡ್ಡಿ ಮಾತನಾಡಿ, ‘ದೇಶದ ಭವಿಷ್ಯ ಕಟ್ಟುವ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅತ್ಯವಶ್ಯಕವಾಗಿದೆ. ಪಾಲಕರು ತಮ್ಮ ಕರ್ತವ್ಯ ನಿಭಾಯಿಸುವುದರ ಜೊತೆಗೆ ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡುವ ಕಾರ್ಯಮಾಡಬೇಕು’ ಎಂದರು. ಸಂಸ್ಥೆಯ ಅಧ್ಯಕ್ಷ ಈಶ್ವರ ರುಮ್ಮಾ ಮಾತನಾಡಿದರು.

ಪ್ರಮುಖರಾದ ಅಮರ ಹಲಮಂಡಗೆ, ಅರವಿಂದ ಕುಲಕರ್ಣಿ, ಶಿವಕುಮಾರ ಕೇರೂರೆ, ದತ್ತು ಪಾಂಡ್ರೆ, ಚಂದ್ರಕಾಂತ ತಳವಾಡೆ, ಲಕ್ಷ್ಮಿ ದೇಶಮುಖ, ಲಕ್ಷ್ಮಿ ಪುರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-33-1442162612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.