ಭಾಲ್ಕಿ: ‘ಶಿಕ್ಷಣವು ಕೇವಲ ಪಠ್ಯ ಪುಸ್ತಕಗಳಲ್ಲಿನ ಜ್ಞಾನಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ದಾರಿಯಾಗಬೇಕು’ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ತಳವಾಡ (ಕೆ) ಗ್ರಾಮದ ಅಲ್ಲಮಪ್ರಭು ಬಿ. ಇಡಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಗುರು ದರ್ಶನ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಸಿದ್ಧಾಂತಾಧಾರಿತ ಅಧ್ಯಯನಕ್ಕಿಂತಲೂ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ತಿಳುವಳಿಕೆಯನ್ನು ವಿಸ್ತರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ’ ಎಂದು ತಿಳಿಸಿದರು.

‘ಪ್ರಾಯೋಗಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ. ವಿಜ್ಞಾನ ಪ್ರಯೋಗಗಳು, ಕ್ರೀಡೆ, ಕಲಾ ಚಟುವಟಿಕೆಗಳು ಹಾಗೂ ಸಮೂಹ ಚರ್ಚೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವುದಲ್ಲದೆ, ತಂಡದಲ್ಲಿ ಕೆಲಸ ಮಾಡುವ ಮನೋಭಾವವನ್ನು ರೂಪಿಸುತ್ತವೆ’ ಎಂದು ಹೇಳಿದರು.

ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಪ್ರಾಚಾರ್ಯ ಪಾಂಡುರಂಗ ವಿ. ಕುಂಬಾರ ಮಾತನಾಡಿದರು. ಹಿರೇಮಠ ಸಂಸ್ಥಾನದ ಶಿವಬಸವ ದೇವರು ಸೇರಿದಂತೆ ಸಿಬ್ಬಂದಿ ಇದ್ದರು. ಸುಧಾರಾಣಿ ಸ್ವಾಗತಿಸಿದರು. ಮಹೇಶ, ಸಹನಾ ನಿರೂಪಿಸಿದರು. ಹಣಮಂತ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-33-1120692455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.