ಭಾಲ್ಕಿ: ‘ತಾಲ್ಲೂಕಿನ ಚನ್ನಬಸವೇಶ್ವರ ಗುರುಕುಲ ಜೆಇಇ, ನೀಟ್ ಸಾಧಕರ ಕೇಂದ್ರವಾಗಿ ಹೊರ ಹೊಮ್ಮುತ್ತಿದೆ. ಈ ವರ್ಷ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ 200 ವಿದ್ಯಾರ್ಥಿಗಳು ತೇರ್ಗಡೆ ಆಗಿರುವುದು ಹೆಮ್ಮೆ ತರಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಸೋಮವಾರ ಆಯೋಜಿಸಿದ್ದ 2027ನೇ ಸಾಲಿನ ಜೆಇಇ ಮೇನ್ಸ್ ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಹಿಂದುಳಿದ ಹಣೆಪಟ್ಟಿ ಹೊತ್ತಿದ್ದ ಗಡಿಭಾಗ ಇದೀಗ ಶೈಕ್ಷಣಿಕ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ ನಡೆದಿದೆ. ಈ ಭಾಗದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಬಸವಲಿಂಗ ಪಟ್ಟದ್ದೇವರು ಸ್ಥಾಪಿಸಿದ ಶೈಕ್ಷಣಿಕ ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣ, ಸಂಸ್ಕಾರಕ್ಕೆ ಒತ್ತು ನೀಡಲಾಗುತ್ತಿದೆ. ಹೀಗಾಗಿ ಈ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅದ್ಭುತ ಸಾಧನೆಗೈಯುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

‘ಒಂದು ಕಾಲದಲ್ಲಿ ಜಿಲ್ಲೆಯಿಂದ ವರ್ಷಕ್ಕೆ ಕೇವಲ 15-20 ವಿದ್ಯಾರ್ಥಿಗಳು ಮಾತ್ರ ವೈದ್ಯಕೀಯ ಕ್ಷೇತ್ರ ಪ್ರವೇಶ ಪಡೆಯುತ್ತಿದ್ದರು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಈ ಭಾಗದ ಮಕ್ಕಳು ಬೆಂಗಳೂರು, ಮೈಸೂರು ಸೇರಿ ಮುಂತಾದ ಕಡೆಗಳಿಗೆ ತೆರಳುತ್ತಿದ್ದರು. ಇದೀಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಎಲ್ಲರೂ ಪೂಜ್ಯರು ಸ್ಥಾಪಿಸಿದ ವಿದ್ಯಾ ಸಂಸ್ಥೆಯ ಕಡೆಗೆ ಮುಖ ಮಾಡಿದ್ದಾರೆ. ಪೂಜ್ಯರ ಸಂಸ್ಥೆಯಲ್ಲಿ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ವಿದ್ಯಾರ್ಥಿಗಳು ಓದಿನ ಜತೆಗೆ ಉತ್ತಮ ಆಚಾರ, ವಿಚಾರ, ನಯ, ವಿನಯತೆ ಮೈಗೂಡಿಸಿಕೊಂಡು ನಾಡಿನ ಉತ್ತಮ ನಾಗರಿಕರಾಗಿ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು’ ಎಂದರು.

ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿದರು. ಆಡಳಿತಾಧಿಕಾರಿ ಮೋಹನ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಉದ್ಯಮಿ ಜಯರಾಜ ಖಂಡ್ರೆ, ಬೀದರ್ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಶಿವಶಂಕರ ಕಾಮಶೆಟ್ಟಿ, ಪುಣೆಯ ಆದಾಯ ತೆರಿಗೆ ಆಯುಕ್ತ ಮಲ್ಲಿಕಾರ್ಜುನ ಉತ್ತುರೆ, ಬೆಂಗಳೂರಿನ ಟೆಕ್ನಿಕಲ್ ಸೇಲ್ಸ್ ಡಿಪಾರ್ಟ್ಮೆಂಟ್ನ ಜಿ.ಎಂ. ಸಂತೋಷ ವಿ. ಸೇರಿದಂತೆ ಹಲವರು ಇದ್ದರು.

ಮಧುಕರ್ ಗಾಂವಕರ್ ನಿರೂಪಿಸಿ, ವಂದಿಸಿದರು.

ಜೆಇಇ ಸಾಧಕರಿಗೆ ಸನ್ಮಾನ: ಜೆಇಇ ಮೇನ್ಸ್ನಲ್ಲಿ ಅಂಗವಿಕಲರ ಕೋಟಾದಡಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದ ವಿಶ್ವರಾಜ, ಪ್ರೀತಂ, ಓಜಾಸ್ ಜೈನ್, ಶಿವಾಂಗ, ವಿವೇಕ, ಉಲ್ಲಾಸ್, ಆಜಿಂಕ್ಯ, ನಾರಾಯಣ ರೆಡ್ಡಿ, ಜಯಂತ, ಆದರ್ಶರೆಡ್ಡಿ, ಅರುಣ, ನಿಧಿ, ರವಿಕುಮಾರ, ಶ್ರೀಶೈಲ್, ಸೋಹನಕುಕಾರ, ರಿಷಬ್, ಋಗ್ವೇದ, ಆದಿತ್ಯ, ಸಾಕ್ಷಿ, ಶಿವಕುಮಾರ್, ಕಾರ್ತಿಕಿ, ಕಿಶನ ಸಿಂಗ್, ಶ್ರೇಯಸ್, ವೈಭವ, ಅನಂತ ಅವರನ್ನು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸನ್ಮಾನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-33-912987770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.