ಭಾಲ್ಕಿ: ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುವ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ 2026-27ನೇ ಸಾಲಿನ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶೇ75 ಮತ್ತು ಹಿಂದುಳಿದ ವರ್ಗಗಳ ಶೇ25ರಷ್ಟು ಸ್ಥಾನಗಳಿಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಮೆಟ್ರಿಕ್ ಪೂರ್ವ ವಸತಿನಿಲಯಗಳಿಗೆ 5 ರಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ನಂತರದ ವಸತಿನಿಲಯಗಳಿಗೆ ಪಿಯು, ಪದವಿ ಮತ್ತು ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್30, ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜುಲೈ31 ಕೊನೆಯ ದಿನ. ಸಮಾಜ ಕಲ್ಯಾಣ ಇಲಾಖೆಯ (swd service Karnataka govt.com) ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

ಆನ್ಲೈನ್ ಸ್ವೀಕೃತಿ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರವೇಶ ಬಯಸುವ ವಸತಿ ನಿಲಯಗಳಿಗೆ ನೇರವಾಗಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯ ಮೂಲಕ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-638822282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.