ಭಾಲ್ಕಿ: ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ಶುಕ್ರವಾರ ತಾಲ್ಲೂಕು ಮಟ್ಟದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರ ಸ್ಥಾನಕ್ಕೆ ಬೆಳಿಗ್ಗೆ 8.30 ಗಂಟೆಯಿಂದ 4.30 ಗಂಟೆಯವರೆಗೆ ಚುನಾವಣೆ ನಡೆಯಿತು. ಒಟ್ಟು 640 ಮತದಾರರಲ್ಲಿ 576 ಶಿಕ್ಷಕ ಮತದಾರರು ಮತ ಚಲಾಯಿಸಿದ್ದಾರೆ.

ಸಾಮಾನ್ಯ ಕ್ಷೇತ್ರದಲ್ಲಿ 9 ನಿರ್ದೇಶಕರು ಮತ್ತು ಮಹಿಳಾ ಕ್ಷೇತ್ರಕ್ಕೆ 4 ನಿರ್ದೇಶಕರನ್ನು ಸೇರಿದಂತೆ ಒಟ್ಟು 13 ನಿರ್ದೇಶಕರನ್ನು ಆಯ್ಕೆ ಮಾಡಬೇಕಿದೆ. ಸ್ವಾಭಿಮಾನಿ ಪ್ಯಾನಲ್ ನಿಂದ 13, ವಿವೇಕಾನಂದ ಪ್ಯಾನಲ್ ನಿಂದ 13 ಮತ್ತು ಒಬ್ಬ ಸ್ವತಂತ್ರ ಅಭ್ಯರ್ಥಿ ಸೇರಿದಂತೆ 27 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಚುನಾವಣೆ ಶಾಂತಿಯುತವಾಗಿ ನಡೆದಿದೆ. ಚುನಾವಣೆಗೂ ಮೊದಲು ಎರಡು ಪ್ಯಾನಲ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-33-1646659606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.