ಭಾರತೀನಗರ: ಗುರಿಯೆಡೆಗೆ ಸಾಗುವವರು ಸಾಧಕರಾಗುತ್ತಾರೆ. ಈ ರೀತಿಯ ಸಾಧನೆ ಮಾಡಿರುವವರು ಸಮಾಜದಲ್ಲಿ ಸಾಕಷ್ಟು ಮಂದಿ ಇದ್ದಾರೆಂದು ಮೈಸೂರು ವಿವಿ ರಿಜಿಸ್ಟರ್ ಪ್ರೊ.ಎನ್.ನಾಗರಾಜು ಹೇಳಿದರು.

ಇಲ್ಲಿಯ ಬಿಇಟಿ ಆವರಣದ ಕುವೆಂಪು ಸಭಾಂಗಣದಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪ್ರಸ್ತುತ ಜಾಗತೀಕರಣ ಹಾಗೂ ಸ್ಪರ್ಧಾತ್ಮಕ ಯುಗವಾಗಿದ್ದು ಇಲ್ಲಿ ಸಾಧನೆ ಮಾಡುವುದು ಸುಲಭವಲ್ಲ, ಪ್ರಬಲ ಶ್ರದ್ಧೆ, ಸಮಯ ಪ್ರಜ್ಞೆ, ಶಿಸ್ತು ರೂಢಿಸಿಕೊಂಡಲ್ಲಿ ಗುರಿಯೆಡೆಗೆ ಸಾಗುವುದು ಸುಲಭವಾಗುತ್ತದೆ. ಗುರಿಯೆಡೆಗೆ ಸಾಗಿದರೆ ಸಾಧನೆ ಮಾಡಿದಂತೆಯೇ. ವಿದ್ಯಾರ್ಥಿಗಳು ಪದವಿ ಪಡೆದ ನಂತರ ಸಂಶೋಧನೆಯತ್ತ ಗಮನ ಹರಿಸಬೇಕು’ ಎಂದರು.

ವಿಧಾನ ಪರಿಷತ್ ಸದಸ್ಯ ಹಾಗೂ ಬಿಇಟಿ ಅಧ್ಯಕ್ಷ ಮಧು ಜಿ.ಮಾದೇಗೌಡ ಮಾತನಾಡಿ, ‘ಹಿಂದಿನ ದಿನಗಳಂತೆ ಪುಸ್ತಕ ಭಂಡಾರದಿಂದ ಏನೂ ಸಾಧಿಸಲು ಸಾಧ್ಯವಿಲ್ಲ. ಪ್ರಸ್ತುತ ಕಂಪ್ಯೂಟರ್ ಯುಗವಾಗಿದ್ದು ಎಲ್ಲಾ ಕೆಲಸಗಳಲ್ಲೂ ಕಂಪ್ಯೂಟರ್ ಉಪಯೋಗಿಸದೆ ಉನ್ನತಿ ಸಾಧಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.

ಮಂಡ್ಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಮಾತನಾಡಿ, ‘ಪದವಿ ಪಡೆದರೆ ಕೇವಲ ಉನ್ನತ ವಿದ್ಯಾಭ್ಯಾಸ ಮಾಡಿದಂತಾಗುತ್ತದೆ. ಅದೇ ಪದವಿಯನ್ನು ಬಳಸಿ ಪ್ರಸ್ತುತ ಲಭ್ಯವಿರುವ ಮಾಹಿತಿ ತಂತ್ರಜ್ಞಾನ ಉಪಯೋಗಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಲ್ಲಿ ಅವರನ್ನು ಸಮಾಜ ಮರಣ ನಂತರವೂ ಗೌರವಿಸುತ್ತದೆ. ವಿದ್ಯಾರ್ಥಿಗಳು ಸಾಧನೆ ಹಾದಿಯಲ್ಲಿ ಸಾಗಬೇಕು’ ಎಂದರು.

ಪರೀಕ್ಷಾ ನಿಯಂತ್ರಕ ಸುಂದರೇಶ್ ಪ್ರಾಸ್ತಾವಿಕ ಮಾತನಾಡಿದರು. ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಗಣಯಂತ್ರ ಹಾಗೂ ಸ್ನಾತಕೋತ್ತರ ವಿಭಾಗದಿಂದ ಒಟ್ಟು 503 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಇದರಲ್ಲಿ ಅತೀ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ರ್ಯಾಂಕ್ ವಿದ್ಯಾರ್ಥಿಗಳಿಗೆ ನಗದು ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಬಿಇಟಿ ಕಾರ್ಯದರ್ಶಿಗಳಾದ ಬಿ.ಎಂ.ನಂಜೇಗೌಡ, ಸಿದ್ದೇಗೌಡ, ಸ್ನಾತ್ತಕೋತ್ತರ ವಿಭಾಗದ ನಿರ್ದೇಶಕ ಎಸ್.ನಾಗರಾಜು, ಪ್ರಾಂಶುಪಾಲ ಮಹದೇವಸ್ವಾಮಿ, ಪ್ರಾಂಶುಪಾಲ ಮಲ್ಲಿಕಾರ್ಜುನ್, ಉಪ ಪರೀಕ್ಷಾ ನಿಯಂತ್ರಕ ಕೆ.ಟಿ.ಗಣೇಶ್, ಟ್ರಸ್ಟಿಗಳಾದ ಬಸವೇಗೌಡ, ಜಯರಾಮು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-118400120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.