ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದಿಂದ ಮಾನ್ಯತೆ ಪಡೆದಿರುವ ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆಯವರ ಶಿಕ್ಷಣದೊಂದಿಗೆ ಯಕ್ಷಗಾನ ಗುರುಕುಲ ಪದ್ಧತಿಯ ವಸತಿ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೂ ಬಾಲಕರಿಗೆ ಪ್ರವೇಶ ನೀಡಲಾಗುವುದು. ಅವಕಾಶ ಪಡೆದ ಬಾಲಕರಿಗೆ ಹತ್ತಿರದ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದಲ್ಲದೇ ಉಚಿತ ಊಟ, ಉಪಾಹಾರ, ವಸತಿಯ ವ್ಯವಸ್ಥೆಯೊಂದಿಗೆ ಯಕ್ಷಗಾನದ ಭಾಗವಂತಿಕೆ, ಮದ್ದಲೆ, ಚೆಂಡೆ ನೃತ್ಯ ಶಿಕ್ಷಣವನ್ನೂ ನೀಡಲಾಗುವುದು.

2026ರ ಮೇ25ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದ್ದು, ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆ ಅಂಚೆ: ಐರೋಡಿ - 576 226, ಉಡುಪಿ ತಾಲ್ಲೂಕು ಮತ್ತು ಜಿಲ್ಲೆ, ದೂರವಾಣಿ 9880605610ಯನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-20-452183522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.