ಭಟ್ಕಳ: ‘ಸಾಹಿತ್ಯ ಅಕ್ಷರಗಳ ಜೋಡಣೆಯಲ್ಲ. ಸಮಾಜ ಸುಧಾರಣೆಗೆ ದಾರಿ ತೋರಿಸುವ ಬೆಳಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗೇಶ್ ಶೆಟ್ಟಿ ಹೇಳಿದರು.

ಪಟ್ಟಣದ ಪ್ರಥಮ ದರ್ಜೇ ಕಾಲೇಜಿನಲ್ಲಿ ಭಟ್ಕಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಒಂದು ಕಾಲಕ್ಕೆ ಪುಸ್ತಕ ರೂಪದಲ್ಲಿಯೇ ವಿಚಾರಗಳನ್ನು ಅಭಿವ್ಯಕ್ತಿ ಪಡಿಸಬೇಕಾಗಿತ್ತು. ಆದರೆ ಇಂದು ಕಾಲ ಬದಲಾಗಿದೆ. ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ವೈಚಾರಿಕ ಚಿಂತನೆಗಳನ್ನು, ಸೃಜನಶೀಲ ಬರೆವಣಿಗೆಗಳನ್ನು ದಾಟಿಸಬಹುದು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಏಕೀಕರಣ ಸಂದರ್ಭದಲ್ಲಿ ಮುಖ್ಯ ಪಾತ್ರ ವಹಿಸಿದ್ದ ಸಾಹಿತ್ಯ ಪರಿಷತ್ತನ್ನು ಹಾಗೆಯೇ ಅದರ ಸಂಸ್ಥಾಪಕರನ್ನು ಸದಾ ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯ’ ಎಂದು ಹೇಳಿದರು.

ಭಟ್ಕಳ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಗಂಗಾಧರ ನಾಯ್ಕ, ಸಾಹಿತಿ ಶ್ರೀಧರ್ ಶೇಟ್ ಉಪನ್ಯಾಸ ನೀಡಿದರು. ಕಸಾಪ ಆಜೀವ ಸದಸ್ಯ, ವಿಜಯ ಬ್ಯಾಂಕ್ ನಿವೃತ್ತ ಮುಖ್ಯ ವ್ಯವಸ್ಥಾಪಕ ಎಂ.ಆರ್. ನಾಯ್ಕ, ಸಾಹಿತಿ ಮಾನಾಸುತ ಶಂಭು ಹೆಗಡೆ ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು ಕಾಲೇಜಿನ ಪ್ರಾಂಶುಪಾಲ ನಾಗೇಶ್ ಶೆಟ್ಟಿ ಅವರನ್ನು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕಸಾಪ ಗೌರವ ಕಾರ್ಯದರ್ಶಿ ನಾರಾಯಣ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-20-1115064592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.