ಬಿಡದಿ: ಬಾಗಲಕೋಟೆ ಬಿ.ವಿ.ವಿ ಸಂಘ ಮತ್ತು ಅಮೃತ ಎಂಜಿನಿಯರಿಂಗ್ ಕಾಲೇಜು ಹಾಗೂ ನಿರ್ವಹಣಾ ವಿಜ್ಞಾನ ಸಂಸ್ಥೆಯಲ್ಲಿ ‘ಬುದ್ಧಿವಂತ ಗಣಕ ವ್ಯವಸ್ಥೆಗಳಿಗಾಗಿ ವಿಶ್ವಾಸಾರ್ಹ ಕೃತಕ ಬುದ್ಧಿಮತ್ತೆ’ ವಿಷಯದ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಿತು.

ಐಇಇಇ ಕಂಪ್ಯೂಟರ್ ಸೊಸೈಟಿ ಬೆಂಗಳೂರು ಘಟಕದ ಅಧ್ಯಕ್ಷ ಡಾ.ಎಂ.ಅಭಿಷೇಕ್ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಿ, ‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಮಾನವ ಕಲ್ಯಾಣಕ್ಕೆ ಪೂರಕವಾಗಿ ಅಭಿವೃದ್ಧಿಪಡಿಸಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಸಂಶೋಧನೆಗಳಿಗೆ ಒತ್ತು ನೀಡಬೇಕು’ ಎಂದರು.

ಸಂಸ್ಥೆ ಪ್ರಾಂಶುಪಾಲ ಡಾ.ಸಂತೋಷ್ ಎಂ.ಮುರನಾಳ ಮತ್ತು ಶೈಕ್ಷಣಿಕ ಮುಖ್ಯಸ್ಥ ಡಾ.ಕಾದದೇವರಮಠ, ಕೃತಕ ಬುದ್ಧಿಮತ್ತೆ ಹಾಗೂ ತಾಂತ್ರಿಕ ಕೌಶಲ ಮಹತ್ವ ವಿವರಿಸಿದರು. ದೇಶ-ವಿದೇಶಗಳ ನೂರಾರು ಸಂಶೋಧಕರು ಪಾಲ್ಗೊಂಡಿದ್ದ ಈ ಸಮಾವೇಶದಲ್ಲಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಸೈಬರ್ ಭದ್ರತೆ ಮತ್ತು ದತ್ತಾಂಶ ವಿಜ್ಞಾನ ಕುರಿತು ಪ್ರಬಂಧ ಮಂಡನೆ ಹಾಗೂ ತಾಂತ್ರಿಕ ಚರ್ಚೆಗಳು ನಡೆದವು.

ಡಾ.ವಿರೇಶ್ ಪಾಟೀಲ, ಡಾ.ಶ್ರೀಧರ್, ಡಾ.ಬಿ.ಬಿ.ಡಿ.ಕುಮಾರ್, ಡಾ.ಮಂಜುನಾಥ್ ಎನ್., ಡಾ.ಅಕ್ಷತಾ ಮುಳಗುಂದ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-15-2031563946

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.