ಬಿಡದಿ: ಈಚೆಗೆ ಅನಾಥಾಶ್ರಮಗಳ ಸಂಖ್ಯೆ ಹೆಚ್ಚುತ್ತಿದೆ. ತಂದೆ-ತಾಯಿ ತಮ್ಮ ಇಡೀ ಜೀವನವನ್ನೇ ಮಕ್ಕಳ ವಿದ್ಯಾಭ್ಯಾಸ ಮತ್ತು ಉತ್ತಮ ಭವಿಷ್ಯಕ್ಕಾಗಿ ಮುಡಿಪಾಗಿಡುತ್ತಾರೆ. ಆದರೆ, ಅಂತಹ ಪೋಷಕರನ್ನು ಯುವ ಪೀಳಿಗೆ ಕಡೆಗಣಿಸುತ್ತಿರುವುದು ವಿಷಾದನೀಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ ತಿಳಿಸಿದರು.

ಬಿಡದಿ ಗಾಣಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಬೆಂಗಳೂರು ವಿಶ್ವವಿದ್ಯಾಲಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಂದೆ-ತಾಯಿಯನ್ನು ಕಡೆಗಣಿಸುವ ಪ್ರಕರಣಗಳು ಪ್ರಸ್ತುತ ನ್ಯಾಯಾಲಯಗಳಲ್ಲಿ ಹೆಚ್ಚಾಗಿ ದಾಖಲಾಗುತ್ತಿದೆ. ಈ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ರಾಜಿ ಮಾಡಿಕೊಳ್ಳಲಾಗುತ್ತಿದೆ. ಆ ಮೂಲಕ ಮಕ್ಕಳಿಗೆ ತಂದೆ-ತಾಯಿ ನೋಡಿಕೊಳ್ಳುವಂತೆ ತಿಳಿಸಲಾಗುತ್ತಿದೆ ಎಂದು ವಿವರಿಸಿದರು.

ಯುವ ಜನರು ಮತ್ತು ಕಾನೂನು ವಿದ್ಯಾರ್ಥಿಗಳ ಸಹಕಾರ, ಸಹಾಯ ಮತ್ತು ಮುಂದಾಳತ್ವ ಪ್ರಸ್ತುತ ಸಮಾಜಕ್ಕೆ ಬಹಳ ಮುಖ್ಯವಾಗಿದೆ. ಸಾರ್ವಜನಿಕರ ಸಮಸ್ಯೆ ಆಲಿಸಿ ಕಾನೂನು ಅರಿವು ಮೂಡಿಸುವ ಮೂಲಕ ಸಹಾಯ ಮಾಡಬೇಕು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸವಿತಾ ಪಿ.ಆರ್ ಮಾತನಾಡಿ, ಗ್ರಾಮೀಣ ಭಾಗದ ಜನರು ಎದುರಿಸುವ ಕಾನೂನು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಶಿಬಿರಗಳನ್ನು ಹಮ್ಮಿಕೊಳ್ಳಲು ಮುಂದಾಗಿದೆ. ಭೂವ್ಯಾಜ್ಯ, ಕೌಟುಂಬಿಕ ತೊಂದರೆ, ಮಹಿಳಾ ದೌರ್ಜನ್ಯ ಸೇರಿದಂತೆ ಕಾನೂನು ಸಮಸ್ಯೆಗಳು ಹೆಚ್ಚಾಗಿರುವ ಗ್ರಾಮಗಳನ್ನು ಗುರುತಿಸಿ ಅಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಎಸ್.ಎಂ., ಕುಲಸಚಿವ ಕೆ.ಟಿ.ಶಾಂತಲಾ, ವಿಶ್ವವಿದ್ಯಾಲಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ಪ್ರಾಂಶುಪಾಲ ಪ್ರೊ.ಡಾ.ವಿ.ಸುದೇಶ್, ಪ್ರೊ.ಡಾ.ಜ್ಯೋತಿ ವಿಶ್ವನಾಥ್, ಕಾನೂನು ನಿಕಾಯ ಡೀನ್ ಪ್ರೊ.ಡಾ.ಎನ್.ಸತೀಶ್ ಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜಿನಿ ಸೇರಿದಂತೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-14-614547480

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.