ಬೀದರ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೀಟ್-ಯುಜಿ 2026 ಪರೀಕ್ಷೆಯ ಗೋಪ್ಯತೆ ಮತ್ತು ವಿಶ್ವಾಸಾರ್ಹತೆ ಕುರಿತು ಉದ್ಭವಿಸಿರುವ ಗಂಭೀರ ಪ್ರಶ್ನೆಗಳು, ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಹಾಗೂ ತನಿಖಾ ಸಂಸ್ಥೆಗಳಿಂದ ಹೊರಬರುತ್ತಿರುವ ಮಾಹಿತಿಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕುರಿತು ಆತಂಕ, ಅನಿಶ್ಚಿತತೆ ಉಂಟುಮಾಡಿವೆ. ಪರೀಕ್ಷೆಗೆ ಮುನ್ನ ಪ್ರಶ್ನೆಪತ್ರಿಕೆ ಅಥವಾ ಅದರ ಯಾವುದೇ ಭಾಗ ಕೆಲವು ವ್ಯಕ್ತಿಗಳ ಕೈಗೆ ತಲುಪಿದ್ದರೆ, ಅದು ಕೇವಲ ಪರೀಕ್ಷಾ ವ್ಯವಸ್ಥೆಯ ಮೇಲಿನ ದಾಳಿಯಷ್ಟೇ ಅಲ್ಲ, ವರ್ಷಪೂರ್ತಿ ಪರಿಶ್ರಮಪಟ್ಟು ತಯಾರಿ ನಡೆಸುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ಅನ್ಯಾಯವೂ ಆಗಿದೆ ಎಂದಿದೆ.

ಪ್ರಕರಣದ ಕುರಿತು ಕೇಂದ್ರ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ನಿಗದಿತ ಅವಧಿಯೊಳಗೆ ತನಿಖೆ ನಡೆಸಬೇಕು. ಯಾವುದೇ ಹಂತದಲ್ಲಿ ಸಹಕಾರ ನೀಡಿರುವ ಎಲ್ಲ ಆರೋಪಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಆಗ್ರಹಿಸಿದೆ.

ತನಿಖೆ ಪೂರ್ಣಗೊಳ್ಳುವವರೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡಿಕೊಂಡು ವಿದ್ಯಾರ್ಥಿಗಳು ಮತ್ತು ಪೋಷಕರ ಮುಂದೆ ವಾಸ್ತವಾಂಶಗಳನ್ನು ಸ್ಪಷ್ಟವಾಗಿ ಮಂಡಿಸಬೇಕು ಎಂದು ಒತ್ತಾಯಿಸಿದೆ.

ಎಬಿವಿಪಿ ಕಾರ್ಯದರ್ಶಿ ಭಗವಂತ ಮಲ್ಲಿಕಾರ್ಜುನ, ವಿಶ್ವಾಸ್, ಪ್ರಶಾಂತ್ ನಗರ, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಗುಡಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-1191230172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.