ಔರಾದ್: ‘ಇಂಗ್ಲಿಷ್ ಮಾಧ್ಯಮದ ಪ್ರಭಾವದಿಂದ ಅಳಿವಿನ ಅಂಚಿಗೆ ತಲುಪಿದ ಗಡಿ ಭಾಗದಲ್ಲಿನ ಕನ್ನಡ ಶಾಲೆ ಉಳಿಸಲು ಸರ್ಕಾರ ಹಾಗೂ ಕನ್ನಡಪರ ಸಂಘಟನೆಗಳು ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಸಂಪನ್ಮೂಲ ಶಿಕ್ಷಕ ಪ್ರಕಾಶ ದೇಶಮುಖ ಹೇಳಿದರು.

ತಾಲ್ಲೂಕಿನ ಸಂತಪೂರ ಆನಂದ ಪ್ರೌಢ ಶಾಲೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಹಾಗೂ ಬೀದದ್ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಗಡಿಭಾಗದಲ್ಲಿ ಕನ್ನಡ ಭಾಷೆಯ ಉಳಿವು ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

‘ಕನ್ನಡ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಶಿಕ್ಷಕರ ನೇಮಕಾತಿ, ಗ್ರಂಥಾಲಯಗಳ ಸ್ಥಾಪನೆ ಹಾಗೂ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪನ್ಯಾಸಕ ದತ್ತಾತ್ರಿ ಮಡಿವಾಳ, ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವು ನಾಡಿನ ಪ್ರಮುಖ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಸ್ಥೆಯಾಗಿದ್ದು, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಂಯೋಜಕ ಮಹೇಶ್ ಗೋರನಾಳಕರ್ ಮಾತನಾಡಿ, ಯುವಜನರು ಇತರ ಭಾಷೆಗಳಿಗೆ ಗೌರವ ನೀಡುವ ಜೊತೆಗೆ ಕನ್ನಡ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು. ಮನೆಗಳಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲೇ ಮಾತನಾಡುವ ಅಭ್ಯಾಸ ಬೆಳೆಸಬೇಸಬೇಕು. ಗಡಿಭಾಗದಲ್ಲಿ ಕನ್ನಡದ ಬಹುತ್ವ ಸಂಸ್ಕೃತಿ ಉಳಿಸಿ ಬೆಳೆಸಲು ಸಂಘದಿಂದ ವಿವಿಧ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ ಮಾಳಗೆ ಮಾತನಾಡಿ, ಕನ್ನಡ ಭಾಷೆಯ ಬೆಳವಣಿಗೆಯ ಜತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿ, ಬಹುಭಾಷಾ ಸಂಗಮ ಭೂಮಿಯಾಗಿರುವ ಔರಾದ್ನಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯದ ಕುರಿತು ಸಮಗ್ರ ಚರ್ಚೆಗಳು ನಡೆಯಬೇಕಿದ್ದು, ಕನ್ನಡದ ಉಳಿವಿಗಾಗಿ ಸರ್ಕಾರದ ಗಮನ ಸೆಳೆಯುವ ಅಗತ್ಯವಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ, ನಾಟಕ ಹಾಗೂ ಗಾಯನ ನಡೆಸಿಕೊಟ್ಟರು.

ಅನೀಲ ಪಾಟೀಲ್ ಧುಪತಮಹಾಗಾಂವ್, ನ್ಯಾಯವಾದಿ ಪ್ಯಾರುಸಾಬ್ ಶೇಖ್, ಶಿಕ್ಷಕರಾದ ರಾಜರೆಡ್ಡಿ, ಮಾಲಸ್ವಾಮಿ, ಶೀಲಾವತಿ, ಕಲ್ಪನಾ, ಉಮಾಕಾಂತ, ಭೀಮಾಶಂಕರ ವೈರಾಗ್ಯ, ರವಿ ಚವಾಣ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-33-1283960583

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.