ಬೀದರ್: ನಗರದ ಬಿ.ವಿ.ಬಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಮಾಜಶಾಸ್ತ್ರ ವಿಭಾಗ ಹಾಗೂ ಬ್ರಹ್ಮಕುಮಾರಿ ಸೇವಾಶ್ರಮದ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಶನಿವಾರ ಮೇರಾ ಭಾರತ್ ನಶಾ ಮುಕ್ತ ಅಭಿಯಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬ್ರಹ್ಮಕುಮಾರಿಯ ಬಿ.ಕೆ ಗುರುದೇವಿ ಬೆಹನ್ಜಿ ಮಾತನಾಡಿ, ‘ದೇಶದಲ್ಲಿ ವಿಶೇಷವಾಗಿ ಯುವ ಪೀಳಿಗೆ ಮಾದಕ ದ್ರವ್ಯದ ವ್ಯಸನಿಗಳಾಗುತ್ತಿರುವುದು ಕಳವಳಕಾರಿ ಸಂಗತಿ. ಮಾದಕ ವಸ್ತುಗಳ ಸೇವನೆಯಿಂದ ಒಬ್ಬ ವ್ಯಕ್ತಿಯಷ್ಟೇ ಅಲ್ಲ, ಅವನ ಕುಟುಂಬ ಹಾಗೂ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು ಅದರಿಂದ ದೂರವಿದ್ದು ಸ್ವಸ್ಥ ಸಮಾಜ, ಸ್ವಸ್ಥ ಭಾರತ ನಿರ್ಮಾಣಕ್ಕೆ ಶ್ರಮಿಸಬೇಕು’ ಎಂದು ಹೇಳಿದರು.

ಪ್ರಾಂಶುಪಾಲೆ ದೀಪ ರಾಗ ಮಾತನಾಡಿ, ‘ಮಾದಕ ವಸ್ತುಗಳ ವ್ಯಸನವು ಯುವಕರನ್ನು ನಾಶ ಮಾಡುತ್ತಿರುವ ಮಹಾಮಾರಿಯಾಗಿ ಬೆಳೆಯುತ್ತಿದೆ. ಇದರಿಂದ ಬೇಗ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ’ ಎಂದು ತಿಳಿಸಿದರು.

ಬಿ.ಕೆ ಮಹಾನಂದ ಬೆಹನ್ಜಿ, ಬಿ.ಕೆ. ಸರ್ವಮಂಗಳ ಬೆಹನ್ಜಿ, ಬಿ.ಕೆ ವಿಜಯಮಾಲಾ ಬೆಹನ್ಜಿ, ಶಿವಕುಮಾರ ಭಯ್ಯಾ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಕೋಟೆ ಹಾಜರಿದ್ದರು. ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-33-1788166080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.