ಕಮಠಾಣ (ಜನವಾಡ): ಕೃಷಿ ಕೋಟಾದಡಿ ಕೃಷಿ, ಪಶು ವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಗೆ ಆನ್ಲೈನ್ನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಳಿಸಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪರೀಕ್ಷಾ ಕೇಂದ್ರದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಪರೀಕ್ಷೆ ಕೇಂದ್ರದ ಎದುರು ಜಮಾಯಿಸಿದ ವಿದ್ಯಾರ್ಥಿಗಳು ಹಾಗೂ ಪಾಲಕರು, ಮೊದಲ ಬಾರಿ ತಿರಸ್ಕರಿಸಿದ ನಂತರ ಪುನಃ ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಶೀಲಿಸಿ ಹಾಲ್ ಟಿಕೆಟ್ ನೀಡಬೇಕು ಇಲ್ಲವೇ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.

ಯುಜಿ ಸಿಇಟಿ ಪ್ರಾಯೋಗಿಕ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿತ್ತು. ಏಪ್ರಿಲ್ 27ರಂದು ಪರೀಕ್ಷೆಗೆ ಅರ್ಹ ಹಾಗೂ ಅನರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತ್ತು. 243 ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕೃತಗೊಳಿಸಲಾಗಿತ್ತು ಎಂದು ತಿಳಿಸಿದರು.

ಆದಾಯ ಪ್ರಮಾಣ ಪತ್ರ, ಅಫಿಡವಿತ್ ಇತ್ಯಾದಿ ಕಾರಣಕ್ಕೆ ತಿರಸ್ಕೃತಗೊಂಡ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪುನಃ ಅಪ್ಲೋಡ್ ಮಾಡಲು ಮೇ 4 ರ ವರೆಗೆ ಕಾಲಾವಕಾಶ ಕೊಟ್ಟಿತ್ತು. 243 ಮಂದಿ ಅಗತ್ಯ ದಾಖಲೆಗಳೊಂದಿಗೆ ಪುನಃ ಅರ್ಜಿಗಳನ್ನು ಅಪ್ಲೋಡ್ ಮಾಡಿದ್ದಾರೆ. ಎಲ್ಲರಿಗೆ ಸಕ್ಸೆಸ್ಫುಲ್ ಎಂಬ ಸಂದೇಶವೂ ಬಂದಿದೆ. ಆದರೆ, ಅವುಗಳ ಪರಿಶೀಲನೆಯನ್ನೇ ಮಾಡಿಲ್ಲ. ಪುನಃ ಅಪ್ಲೋಡ್ ಮಾಡಿದ ಎಲ್ಲ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ ಎಂದು ಆರೋಪಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಲೋಪದಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ಕೂಡಲೇ ಪುನಃ ಅಪ್ಲೋಡ್ ಮಾಡಿದ ಅರ್ಜಿಗಳನ್ನು ಪರಿಶೀಲಿಸಿ, ಹಾಲ್ ಟಿಕೆಟ್ ಕೊಡಬೇಕು. ಅದು ಸಾಧ್ಯವಾಗದಿದ್ದರೆ ಭಾನುವಾರ ನಡೆಯಲಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಬಜರಂಗ ಕಾಶೆಂಪುರ, ದಿಲೀಪಕುಮಾರ ವರ್ಮಾ, ಶ್ರೀಕಾಂತ ಸಾಗರ್, ಪೀಟರ್, ರಾಜಶೇಖರ ದೇವಣಿ ಕಂದಗೂಳ್, ಆದರ್ಶ ರಾಜಕುಮಾರ, ಸ್ನೇಹಾ ರಾಜಕುಮಾರ, ಪ್ರಜ್ವಲ್ ವಿಶ್ವನಾಥ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-33-127946329

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.