ಕಮಠಾಣ(ಜನವಾಡ): ‘ಅಗತ್ಯ ದಾಖಲೆ ಅಪ್ಲೋಡ್ ಮಾಡಿದ ನಂತರವೂ ಕೃಷಿ ಹಾಗೂ ಪಶು ವೈದ್ಯಕೀಯ ಪ್ರವೇಶದ ಪ್ರಾಯೋಗಿಕ ಪರೀಕ್ಷೆಯ ಆನ್ಲೈನ್ ಅರ್ಜಿಗಳನ್ನು ತಿರಸ್ಕರಿಸಲಾಗಿದೆ’ ಎಂದು ಆರೋಪಿಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಪಶುವೈದ್ಯಕೀಯ ಕಾಲೇಜಿನ ಪರೀಕ್ಷಾ ಕೇಂದ್ರದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಅರ್ಹರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಿದ ನಂತರ ವಿದ್ಯಾರ್ಥಿಗಳು ಹಾಗೂ ಪಾಲಕರು ಕೇಂದ್ರದ ಎದುರು ಧರಣಿ ಕುಳಿತರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

‘ಪ್ರಾಯೋಗಿಕ ಪರೀಕ್ಷೆಯಲ್ಲಿ ರೈತರ ಕೋಟಾದಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕು. ಪರೀಕ್ಷೆಯನ್ನು ಮಂದೂಡಬೇಕು’ ಎಂದು ಆಗ್ರಹಿಸಿದರು.

‘ಬೀದರ್ ಪಶುವೈದ್ಯಕೀಯ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆಗೆ ಆನ್ಲೈನಲ್ಲಿ ಸಲ್ಲಿಸಿದ್ದ 995 ವಿದ್ಯಾರ್ಥಿಗಳ ಅರ್ಜಿ ಪೈಕಿ 243 ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ತಿರಸ್ಕೃತಗೊಂಡ ಅಭ್ಯರ್ಥಿಗಳು ಮೇ 1ರಿಂದ 4 ರವರೆಗೆ ಲೋಪ ದೋಷ ಸರಿಪಡಿಸಿ, ಅಗತ್ಯ ದಾಖಲೆಗಳೊಂದಿಗೆ ಅಪ್ಲೋಡ್ ಮಾಡಿದ ಅರ್ಜಿಗಳ ಪರಿಶೀಲನೆ ಮಾಡಿಲ್ಲ’ ಎಂದು ದೂರಿದರು.

‘ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಲೋಪದಿಂದ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ತಿರಸ್ಕೃತಗೊಳಿಸಲಾದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಬೀದರ್ ತಹಶೀಲ್ದಾರ್ ರವೀಂದ್ರ ದಾಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ರಾಜ್ಯ ಅಧ್ಯಕ್ಷ ದಿಲೀಪಕುಮಾರ ವರ್ಮಾ, ವಕೀಲ ಬಜರಂಗ ತಮಗೊಂಡ, ಶ್ರೀಕಾಂತ ಸಾಗರ, ಅನಿಲಕುಮಾರ ಬಾಜಿ, ಪೀಟರ್, ರಾಜಶೇಖರ ಶೇರಿಕಾರ, ಮಾರುತಿ ಕಂಟಿ ಮೊದಲಾದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-33-1411818897

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.