ಚಿಟಗುಪ್ಪ(ಹುಮನಾಬಾದ್): ‘ಕನ್ನಡ ಭಾಷೆ ಉಳಿಸಿ, ಬೆಳೆಸುವ ಕಾರ್ಯ ಎಲ್ಲರೂ ಮಾಡಬೇಕು’ ಎಂದು ಅಯ್ಯಪ್ಪ ಸ್ವಾಮಿ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕನ್ನಡ ನಾಡಿನ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಕಸಾಪ ನಾಡು ನುಡಿಯ ರಕ್ಷಣೆಗೆ ಸಾಕಷ್ಟು ಉತ್ತಮ ಕೆಲಸ ಮಾಡುತ್ತಿದೆ. ಕನ್ನಡವು ನಮ್ಮ ಬುದಕಿನ ಭಾಗ ನಮ್ಮ ಆಲೋಚನೆ ಸಂಸ್ಕಾರ, ಸಂಸ್ಕೃತಿ, ಜೀವನ ಶೈಲಿ, ಬದುಕು ಬರಹ, ಎಲ್ಲೆಡೆಯೂ ಕನ್ನಡವಿದೆ. ಕನ್ನಡ ನಮ್ಮಆಸ್ಮಿತೆ. ಕಸಾಪಗೆ ಭವ್ಯ ಇತಿಹಾಸವಿದೆ. ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿ, ಇತಿಹಾಸ ಮತ್ತು ಪ್ರೋತ್ಸಾಹಿಸುತ್ತಿದೆ’ ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಜಯಕುಮಾರ ಸಿಂಧೆ ಮಾತನಾಡಿ, ‘ರಾಜ್ಯದಾದ್ಯಂತ ಕನ್ನಡ ಶಾಲೆಗಳ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಹೋರಾಟ ಶ್ಲಾಘನೀಯವಾಗಿದೆ’ ಎಂದರು.

ನಿವೃತ್ತ ಪ್ರಾಚಾರ್ಯ ಆರ್.ಎಸ್.ಪಾಟೀಲ ಮಾತನಾಡಿ, ‘ಕನ್ನಡ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಮೈಸೂರು ಮಹಾರಾಜರಾದ ಕೃಷ್ಣರಾಜ ಒಡೆಯರ ನಾಲ್ವಡಿ ಅವರ ಕೊಡುಗೆ ಅಪಾರವಾಗಿದೆ’ ಎಂದು ಹೇಳಿದರು.

ಚಿತ್ರಶೇಖರ ಚಿರಳ್ಳಿ ಮಾತನಾಡಿ, ‘ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಯ ಉಳಿವಿಗೆ ಶತಮಾನಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿದೆ’ ಎಂದು ಹೇಳಿದರು.

ತಾಲ್ಲೂಕು ಕಸಾಪ ಅಧ್ಯಕ್ಷ ಅನಿಲಕುಮಾರ ಸಿಂಧೆ ಮಾತನಾಡಿ, ‘ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ಅತ್ಯಂತ ಗೌರವಪೂರ್ಣವಾಗಿದೆ. ಕನ್ನಡ ಶಾಲೆಗಳ ಉಳಿವಿಗಾಗಿ ರಾಜ್ಯದಾದ್ಯಂತ ನಡೆಯುತ್ತಿರುವ ಹೋರಾಟದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಕ್ರಿಯವಾಗಿ ಭಾಗವಹಿಸುತ್ತಿದ್ದು, ವಿವಿಧ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ಅಭಿಮಾನ ಬೆಳೆಸುತ್ತಿದೆ’ ಎಂದು ಹೇಳಿದರು.

ಶಾಂತಕುಮಾರ, ಶಿವಕುಮಾರ, ಮೀನಾಕ್ಷಿ ಪಾಟೀಲ, ಶಾಂತಕುಮಾರ ಪಾಟೀಲ, ರಮೇಶ ಸೇರಿದಂತೆ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-33-979728425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.