ಬೀದರ್: ನಗರದ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112 ನೇ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿರುವ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರೋತ್ಸಾಹಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚೆನಶೆಟ್ಟಿ ಪ್ರತಕಟಣೆಯಲ್ಲಿ ತಿಳಿಸಿದ್ದಾರೆ.

‘ಹತ್ತನೆ ತರಗತಿಯಲ್ಲಿ ಶೇ 95 ಕಿಂತ ಹೆಚ್ಚು ಅಂಕ ಪಡೆದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಮತ್ತು ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಹಾಗೂ ಕನ್ನಡ ಬೋಧನೆ ಮಾಡಿರುವ ಶಿಕ್ಷಕರನ್ನು ಸನ್ಮಾನಿಸಲಾಗುತ್ತಿದೆ. ಜೊತೆಗೆ ಶೇ. 100 ರಷ್ಟು ಫಲಿತಾಂಶ ಪಡೆದಿರುವ ಕನ್ನಡ ಮಾಧ್ಯಮದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮುಖ್ಯಸ್ಥರನ್ನು, ಶಿಕ್ಷಣ ಸಂಸ್ಥೆಗಳ ಪ್ರಮುಖರನ್ನು ಸಹ ಸನ್ಮಾನಿಸಲಾಗುತ್ತದೆ’ ಎಂದಿದ್ದಾರೆ.

‘ಸಾಹಿತ್ಯ ಪರಿಷತ್ತಿನ 112 ನೇ ಸಂಸ್ಥಾಪನಾ ದಿನದ ಸ್ಮರಣಾರ್ಥ ರಾಜ್ಯದ 112 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಹೀನ್ ಸಂಸ್ಥೆಯ ಕಾಲೇಜುಗಳಲ್ಲಿ ಎರಡು ವರ್ಷಗಳ ಪಿಯುಸಿ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ. ಇದು ಪರಿಷತ್ತಿನ ಸಂಸ್ಥಾಪನಾ ದಿನವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಲಿದ್ದು, ಶಾಹೀನ್ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಒಪ್ಪಿಕೊಂಡಿದ್ದಾರೆ’ ಎಂದು ಸುರೇಶ ಚೆನಶೆಟ್ಟಿ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಓದಿ, ಎಸ್ಎಸ್ಎಲ್ಸಿಯಲ್ಲಿ ಶೇ. 95 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಬೀದರ್ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಇರುವ ಶಾಹೀನ್ ಸಂಸ್ಥೆಯ ಕಾಲೇಜುಗಳಲ್ಲಿ ಎರಡು ವರ್ಷಗಳ ಪಿಯುಸಿ ಶಿಕ್ಷಣವನ್ನು ಉಚಿತವಾಗಿ ಪಡೆಯಬಹುದು. ಆಸಕ್ತ, ಅರ್ಹ ವಿದ್ಯಾರ್ಥಿಗಳು ತಮ್ಮ ತಮ್ಮ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರ ಮೂಲಕ ಹೆಸರು ನೋಂದಾಯಿಸಬಹುದು.

ಪ್ರತಿಭಾ ಪುರಸ್ಕಾರಕ್ಕಾಗಿ ಅಂಕಪಟ್ಟಿ ಜೆರಾಕ್ಸ್ ಪ್ರತಿ ಹಾಗೂ ಇತ್ತಿಚಿನ ಎರಡು ಭಾವಚಿತ್ರದೊಂದಿಗೆ ಕನ್ನಡ ಭವನದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಬಹುದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ, ಗೌರವ ಕೋಶಾಧ್ಯಕ್ಷ ಶಿವಶಂಕರ ಟೋಕರೆ (9986792323, 9341652131) ಅವರನ್ನು ಸಂಪರ್ಕಿಸಬಹುದು. ಉಚಿತ ಶಿಕ್ಷಣಕ್ಕಾಗಿ ತಮ್ಮ ಹೆಸರನ್ನು ಶಾಹೀನ್ ಸಂಸ್ಥೆಯ ವೆಬ್ಸೈಟ್ https://shaheengroup.org/shaheen-golden-offer/ ಅಲ್ಲಿ ನೋಂದಾಯಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-33-1705692792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.