ಬೀದರ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಹಾಗೂ ಇದಕ್ಕಾಗಿ ಪರೀಕ್ಷೆಗಳನ್ನು ರದ್ದುಪಡಿಸಿರುವುದಕ್ಕೆ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಅಸಮಾಧಾನ ಹೊರಹಾಕಿದ್ದಾರೆ.

ವಿದ್ಯಾರ್ಥಿಗಳ ಜತೆ ಚೆಲ್ಲಾಟ: ಪರೀಕ್ಷೆ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಪಡಿಸಿರುವುದು ದೇಶದ ಶಿಕ್ಷಣ ವ್ಯವಸ್ಥೆಗೆ ಅತ್ಯಂತ ನಾಚಿಕೆಗೇಡು ಸಂಗತಿ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್ ಪ್ರತಿಕ್ರಿಯಿಸಿದ್ದಾರೆ.

ಪರೀಕ್ಷೆ ರದ್ದು ಪಡಿಸಿ ಮರು ಪರೀಕ್ಷೆ ಘೋಷಿಸಿರುವುದು ವರ್ಷವಿಡೀ ಪರಿಶ್ರಮ ಪಟ್ಟು ಸಿದ್ಧತೆ ನಡೆಸಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ನಿರಾಶೆ, ಅನಿಶ್ಚಿತತೆ ಹಾಗೂ ಮಾನಸಿಕ ಒತ್ತಡ ಉಂಟು ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಡೆದಿರುವ ಘಟನೆ ಅತ್ಯಂತ ದುರದೃಷ್ಟಕರವಾಗಿದೆ. ಇದು, ಪ್ರಾಮಾಣಿಕ ವಿದ್ಯಾರ್ಥಿಗಳ ಕನಸುಗಳನ್ನು ಭಗ್ನಗೊಳಿಸಿದೆ. ಮಕ್ಕಳ ಭವಿಷ್ಯದ ಜತೆ ಯಾರೂ ಚೆಲ್ಲಾಟ ಆಡಬಾರದು. ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ನೋಡಿ ಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ದೇಶದಾದ್ಯಂತ ಇರುವ ತನ್ನ ಎಲ್ಲ ಕೇಂದ್ರಗಳ ಹಾಗೂ ಆನ್ಲೈನ್ ವೇದಿಕೆಗಳ ಮೂಲಕ ನೀಟ್ ಮರು ಪರೀಕ್ಷೆ ತಯಾರಿಗೆ ಉಚಿತ ನೆರವು ನೀಡಲಾಗುವುದು ಎಂದ ತಿಳಿಸಿದ್ದಾರೆ.

ನೀಟ್ ಅಕ್ರಮಕ್ಕೆ ಎನ್ಟಿಎ ವೈಫಲ್ಯ ಕಾರಣ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ವೈಫಲ್ಯವೇ ಕಾರಣವಾಗಿದೆ ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಆರೋಪಿಸಿದ್ದಾರೆ.

ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಪರೀಕ್ಷೆ ರದ್ದುಪಡಿಸಿ, ಸಿಬಿಐ ತನಿಖೆಗೆ ಆದೇಶಿಸಲಾಗಿದೆ. ಆದರೆ, ನೀಟ್ ಪರೀಕ್ಷೆಯ ವಿಶ್ವಾಸಾರ್ಹತೆ ಹಾಗೂ ಪಾರದರ್ಶಕತೆಗೆ ಧಕ್ಕೆ ಉಂಟಾಗಿದೆ ಎಂದು ದೂರಿದ್ದಾರೆ. ಈ ಹಿಂದೆಯೂ ನೀಟ್ ಪರೀಕ್ಷೆ ಅಕ್ರಮಗಳ ಬಗ್ಗೆ ಅನೇಕ ಅನುಮಾನ ವ್ಯಕ್ತವಾಗಿದ್ದವು. ಹೀಗಾಗಿ ಏಜೆನ್ಸಿ ಮತ್ತೆ ಅದಕ್ಕೆ ಆಸ್ಪದ ನೀಡದಂತೆ ಪರೀಕ್ಷೆ ನಡೆಸಬೇಕಿತ್ತು. ಆದರೆ, ಹಾಗೆ ಮಾಡಿಲ್ಲ ಎಂದು ಆಪಾದಿಸಿದ್ದಾರೆ.

ಯಾರದೋ ತಪ್ಪಿಗೆ, ಯಾರೋ ಶಿಕ್ಷೆ ಅನುಭವಿಸಬೇಕಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮುಂದೆ ಈ ರೀತಿಯ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-33-2142242246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.