ಬೀದರ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಹಾಗೂ ಈಗಾಗಲೇ ನಡೆದ ಪರೀಕ್ಷೆ ರದ್ದುಪಡಿಸಿರುವುದು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ವರ್ಷಪೂರ್ತಿ ಶ್ರಮಪಟ್ಟು ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ಬಂದರೆ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಗಾಗುವ ಸಾಧ್ಯತೆ ಇದೆ. ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದು ಅತ್ಯಂತ ಖಂಡನೀಯ ಹಾಗೂ ಅಪರಾಧಕರ ಸಂಗತಿಯಾಗಿದೆ ಎಂದು ಶ್ರೀ ನಾನಕ ಝೀರಾ ಸಾಹೇಬ್ ಅಧ್ಯಕ್ಷ ಎಸ್.ಬಲಬೀರ್ ಸಿಂಗ್ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ವಿರುದ್ಧ ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು, ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಜಗುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಗುರು ನಾನಕ್ ಪದವಿ ಪೂರ್ವ ಕಾಲೇಜು ವತಿಯಿಂದ ನೀಟ್ ವಿದ್ಯಾರ್ಥಿಗಳಿಗೆ ಆನ್ಲೈನ್ ಹಾಗೂ ಆಫ್ಲೈನ್ ಕೋಚಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ್: ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಇದು ಕೇವಲ ಒಂದು ಪರೀಕ್ಷೆಯ ಸೋರಿಕೆ ಮಾತ್ರವಲ್ಲ, ದೇಶದ ಸಂಪೂರ್ಣ ಶಿಕ್ಷಣ ವ್ಯವಸ್ಥೆಯ ಮೇಲಿನ ದೊಡ್ಡ ದಾಳಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ ಟೀಕಿಸಿದ್ದಾರೆ.

ಮೇ3ರಂದು ಸುಮಾರು 23 ಲಕ್ಷ ವಿದ್ಯಾರ್ಥಿಗಳು ಬರೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿರುವುದು ಅತ್ಯಂತ ದುರಂತ. ಇದೇ ಮೊದಲ ಬಾರಿ ಅಲ್ಲ 2017, 2021, 2024 ಹಾಗೂ ಇದೀಗ 2026ರಲ್ಲಿ ಸಹ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದು ಪರೀಕ್ಷೆ ರದ್ದುಗೊಂಡಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ. ವೈದ್ಯರಾಗುವ ಕನಸಿನೊಂದಿಗೆ ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗಿರುತ್ತಾರೆ. ನಿರಂತರ ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರ ಕನಸುಗಳು ನುಚ್ಚುನೂರಾಗುತ್ತಿವೆ. ಇಂಥ ಘಟನೆ ಮರುಕಳಿಸದಂತೆ ಶಾಶ್ವತ ಪರಿಹಾರ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-1892712782

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.