ಬೀದರ್: ನಗರದ ಶ್ರೀ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸರಸ್ವತಿ ಶಿಕ್ಷಣ ವಿಕಾಸ ಸಮಿತಿ(ರಿ) ಸಂಚಾಲಿತ ಶಾಲೆಯ ಆವರಣವನ್ನು ಪುಷ್ಪ ಹಾಗೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಪುಷ್ಪವರ್ಷದ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಅಧ್ಯಕ್ಷ ಪ್ರೊ. ಎಸ್.ಬಿ. ಸಜ್ಜನಶೆಟ್ಟಿ,ಶಾಲೆಯ ಮುಖ್ಯಶಿಕ್ಷಕ ಪ್ರತಿಭಾ ಚಾಮಾ ಮಾತನಾಡಿದರು.

ಕಾರ್ಯಕ್ರಮದಲ್ಲಿ 10ನೇ ತರಗತಿ ವಿದ್ಯಾರ್ಥಿ ಆದಿತ್ಯ ಅನಿಲಕುಮಾರ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಭಗಿನಿ ರಿತಿಕಾ ಸ್ವಾಗತಿಸಿ ಪರಿಚಯಿಸಿದರು. ಪುನಿತ್ ವೈಯಕ್ತಿಕ ಗೀತೆ ಹಾಡಿದರು. ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಆದಿತ್ಯ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-1624775696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.