ಬೀದರ್: ‘ಇಂದಿನ ಜಗತ್ತಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ತಂತ್ರಜ್ಞಾನ ಅತ್ಯಂತ ಪ್ರಮುಖವಾದ ಪಾತ್ರ ವಹಿಸುತ್ತಿದೆ. ತಂತ್ರಜ್ಞಾನವಿಲ್ಲದೆ ಭವಿಷ್ಯವಿಲ್ಲ ಎಂಬುದು ಇಂದಿನ ಕಾಲಘಟ್ಟದ ಸತ್ಯವಾಗಿದೆ. ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ಹೆಚ್ಚಿನ ಹೂಡಿಕೆ ಅಗತ್ಯವಾಗಿದೆ ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಬಿ.ಎಸ್. ಬಿರಾದಾರ ತಿಳಿಸಿದರು.

ನಗರದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಏರ್ಪಡಿಸಿದ್ದ ‘ವಿಕಸಿತ ಭಾರತ @2047 ಕನಸಿನ ಸಾಕಾರಕ್ಕಾಗಿ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಹಾಗೂ ನವೀನತೆಗಳು’ಎಂಬ ವಿಷಯ ಕುರಿತ ಎರಡು ದಿನಗಳ ರಾಷ್ಟ್ರಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ತಂತ್ರಜ್ಞಾನದಿಂದಾಗುವ ಅನಾಹುತಗಳಿಗೆ ಯಾರು ಹೊಣೆಗಾರರು ಎಂಬ ಪ್ರಶ್ನೆ ಇಂದಿನ ಸಮಾಜದ ಮುಂದೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇತ್ತೀಚಿನ ದಿನಗಳಲ್ಲಿ ಪ್ರಾಧ್ಯಾಪಕರು ಹಾಗೂ ಸಂಶೋಧಕರು ತಂತ್ರಜ್ಞಾನದ ನೆರವಿನಿಂದ ಅನೇಕ ಲೇಖನಗಳನ್ನು ಪ್ರಕಟಿಸುತ್ತಿದ್ದರೂ ಸ್ವಂತ ಚಿಂತನೆ ಮತ್ತು ಬೌದ್ಧಿಕ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಅಗತ್ಯ. ಸ್ವಂತ ಸಂಶೋಧನೆ ಹಾಗೂ ಆವಿಷ್ಕಾರಗಳ ಮೂಲಕ ಸಮಾಜ ಮತ್ತು ರಾಷ್ಟ್ರ ಅಭಿವೃದ್ಧಿಗೆ ಕೈಜೋಡಿಸಬೇಕಿದೆ ಎಂದು ಹೇಳಿದರು.

ಆಧುನಿಕ ಯುಗಕ್ಕೆ ತಕ್ಕಂತೆ ತರಗತಿ ಬೋಧನೆ ಹಾಗೂ ಪ್ರಾಯೋಗಿಕ ಅಧ್ಯಯನವನ್ನು ವಾಣಿಜ್ಯ ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯಕ. ವಿದ್ಯಾರ್ಥಿಗಳು ತಮ್ಮ ಪಾಲಕರ ಕನಸುಗಳನ್ನು ನನಸಾಗಿಸುವ ದಿಕ್ಕಿನಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.

ಲಘು ಉದ್ಯೋಗ ಭಾರತಿ ಬೀದರ್ ಘಟಕದ ಅಧ್ಯಕ್ಷ ಸಚ್ಚಿದಾನಂದ ಚಿದ್ರಿ ಮಾತನಾಡಿ, ದೇಶದ ಜನಸಂಖ್ಯೆಗೆ ಅನುಗುಣವಾಗಿ ಕೈಗಾರಿಕೆಗಳು ಹಾಗೂ ತಂತ್ರಜ್ಞಾನ ಅಭಿವೃದ್ಧಿಯಾಗಬೇಕಿದೆ. ಕೈಗಾರಿಕೆ ಮತ್ತು ಶಿಕ್ಷಣ ಪರಸ್ಪರ ಪೂರಕವಾಗಿದ್ದು, ಯುವಜನತೆ ಉದ್ಯಮಶೀಲತೆಯತ್ತ ಮುಖ ಮಾಡಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿದ ನಂತರ ಉದ್ಯೋಗಕ್ಕಾಗಿ ಅಲೆದಾಡುವವರಾಗದೆ, ಸ್ವಂತ ಉದ್ಯೋಗ ಸೃಷ್ಟಿಸಿ ಇತರರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಬೇಕು. ಆತ್ಮನಿರ್ಭರ ಮತ್ತು ಉದ್ಯಮಶೀಲ ಮನೋಭಾವವೇ ದೇಶದ ಅಭಿವೃದ್ಧಿಗೆ ಬುನಾದಿಯಾಗುತ್ತದೆ ಎಂದು ಹೇಳಿದರು.

ಉಸ್ಮಾನಿಯಾ ವಿಶ್ವವಿದ್ಯಾಲಯದ ಹಿರಿಯ ವಾಣಿಜ್ಯ ಪ್ರಾಧ್ಯಾಪಕ ಡಿ. ಚನ್ನಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸತೀಶ್ ಪಾಟೀಲ, ಜಂಟಿ ಕಾರ್ಯದರ್ಶಿ ಶಿವಾನಂದ ಗಾದಗಿ, ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ವೀರಭದ್ರಪ್ಪ ಬುಯ್ಯ, ರವಿ ಹಾಲಹಳ್ಳಿ, ಕಮಲಾಪುರ ಸಿದ್ದರಾಜ ಪಾಟೀಲ, ಧೂಳಪ್ಪ ಪಾಟೀಲ, ಐಕ್ಯೂಎಸಿ ಸಂಯೋಜಕಿ ಸೋಮೇಶ್ವರಿ ಮುದ್ದಾ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಸೋಮನಾಥ ಬಿರಾದಾರ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಶಶಿಧರ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕಿ ಸ್ವಾತಿ ಅಡ್ಡೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-33-2037152849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.