ಅಷ್ಟೂರು(ಜನವಾಡ): ‘ಮಹಿಳೆಯರು ಸಾಧನೆಗೆ ಇರುವ ಅವಕಾಶಗಳ ಸದುಪಯೋಗ ಪಡೆಯಬೇಕು’ ಎಂದು ಬೀದರ್ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು.

ಬೀದರ್ ತಾಲ್ಲೂಕಿನ ಅಷ್ಟೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವ ಉದ್ಯೋಗ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಮುಂದೆ ಬರಬೇಕು’ ಎಂದು ಸಲಹೆ ಮಾಡಿದರು.

‘ಮಹಿಳೆಯರಲ್ಲಿ ಅಗಾಧ ಶಕ್ತಿ ಇದೆ. ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಹೀಗಾಗಿ ಕೀಳರಿಮೆ ಬಿಟ್ಟು, ಮುಂದಡಿ ಇಡಬೇಕು’ ಎಂದು ಪಿಡಿಒ ಗಾಯತ್ರಿದೇವಿ ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಮಾತನಾಡಿದರು. ಮಹಿಳೆಯರು ಕೋಲಾಟ ಪ್ರದರ್ಶಿಸಿ ಗಮನ ಸೆಳೆದರು. ವಿವಿಧ ಸ್ಪರ್ಧೆಗಳ ವಿಜೇತ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕಿಯರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೀದರ್ ಗ್ರಾಮೀಣ ಠಾಣೆ ಪಿಎಸ್ಐ ಸಂಗಮ್ಮ, ವಕೀಲ ಧನವಂತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಣುಕಾ, ಸದಸ್ಯರಾದ ಕಸ್ತೂರಿಬಾಯಿ, ವಿಜಯಲಕ್ಷ್ಮಿ, ಶಂಕರೆಮ್ಮ, ಸಂಗಾರೆಡ್ಡಿ, ಕುಶಾಲರಾವ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-33-114854283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.